ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿದ್ದು ಮೆಡಿಕಲ್, ಎಂಜಿನಿಯರಿಂಗ್ ಸೀಟ್ ಪಡೆಯಲು ಪರೀಕ್ಷೆ ಆಗಬೇಕು. ಅದಕ್ಕೆ ಮಿನಿಮಮ್ ಪರೀಕ್ಷೆ ಅಂಕ ಬೇಕು. ಹೀಗಾಗಿ ಸಿಇಟಿ ಪರೀಕ್ಷೆ ಮಾಡಲಾಗುವುದು ಎಂದು ಡಿಸಿಎಂ ಹಾಗೂ ಉನ್ನತ ಶಿಕ್ಷಣ‌ ಸಚಿವ ಅಶ್ವತ್ಥ್‌ ನಾರಾಯಣ್ ಹೇಳಿದ್ದಾರೆ.

ಇಂದು ನಗರದಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆ ಕುರಿತು ಸಂಬಂಧಿಸಿದ ಅಧಿಕಾರಗಳ ಸಭೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು. ಪರೀಕ್ಷೆ ಇಲ್ಲದೆ ಪಾಸ್ ಅಂತ ಮಾಡಬಹುದಿತ್ತು.
ಆದ್ರೆ ಮುಂದೆ ಅವರಿಗೆ ತೊಂದರೆಯಾಗಲಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದ್ರು.

ಪಿಯುಸಿ ಪರೀಕ್ಷೆ ರದ್ದಾಗಿದ್ದು, ಎಲ್ಲರೂ ಪಾಸ್ ಆಗಿದ್ದಾರೆ. ಪಿಯುಸಿ ನಂತರ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಸೀಟ್ ಪಡೆಯಲು ಕನಿಷ್ಠ ಅಂಕ ಬೇಕು. ಅದಕ್ಕಾಗಿ ಸಿಇಟಿ ಪರೀಕ್ಷೆ ಮಾನದಂಡ.
ಸಿಇಟಿ ಮೂಲಕ ಬರುವ ಅಂಕದ ಆಧಾರದ ಮೇಲೆ ಮೆಡಿಕಲ್, ಡೆಂಟಲ್ ಹಾಗೂ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಈ‌ ಬಾರಿಯ ದ್ವಿತೀಯ ಪಿಯು ಫಲಿತಾಂಶ ಘೋಷಣಾ ಪ್ರಕ್ರಿಯೆಯಲ್ಲಿ ಆಯಾ ವಿದ್ಯಾರ್ಥಿಗಳ ಪ್ರಥಮ ಪಿಯು ಹಾಗೂ ಎಸ್.ಎಸ್.ಎಲ್.ಸಿ ಅಂಕಗಳನ್ನು ಮಾನದಂಡಗಳಾಗಿ ಪರಿಗಣಿಸಲಾಗುತ್ತಿದೆ. ವೃತ್ತಿಪರ‌ ಕೋರ್ಸಿಗೆ ಪ್ರವೇಶ ಕಲ್ಪಿಸುವ ಸಿ.ಇ.ಟಿ.ಪರೀಕ್ಷೆಗೆ ಪಿಯು ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆಯನ್ನು ಕೈಬಿಟ್ಟು, ಕೇವಲ ಸಿ.ಇ.ಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಱಂಕಿಂಗ್ಗೆ ಪರಿಗಣಿಸುವ ತೀರ್ಮಾನ ತೆಗೆದುಕೊಳ್ಳಬೇಕೆಂದು ಇಂದು ಸಚುವ ಸುರೇಶ್ ಕುಮಾರ್ ಅಶ್ವತ್ಥ ನಾರಾಯಣ್ ಅವರನ್ನು ಕೋರಿದ್ದಾರೆ.

The post 2nd ಪಿಯುಸಿ ಪರೀಕ್ಷೆ ರದ್ದು: CET ಬಗ್ಗೆ ಸಚಿವ ಅಶ್ವತ್ಥ್​​ ನಾರಾಯಣ್ ಹೇಳಿದ್ದೇನು? appeared first on News First Kannada.

Source: newsfirstlive.com

Source link