ಬೆಂಗಳೂರು: ಮೇ 10 ರಿಂದ ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೆ ತರಲಾಗಿದೆ, ಇದರಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಸುಧಾರಿಸಿದೆ ಅಂತಾ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ.. ಬೆಂಗಳೂರಲ್ಲಿ ಕೊರನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಕೋವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ, ರಾಜ್ಯದಲ್ಲಿ ಏಪ್ರಿಲ್ 24 ರಿಂದ ನಿರ್ಬಂಧ ಹೇರಲಾಗಿತ್ತು. ಮೇ 10 ರಿಂದ ಮತ್ತಷ್ಟು ನಿರ್ಬಂಧ ಬಿಗಿಗೊಳಿಸಲಾಯಿತು. ರಾಜ್ಯದಲ್ಲಿ ಮೇ 5 ರಂದು ಗರಿಷ್ಠ ಪ್ರಮಾಣದ ಸೋಂಕು ದಾಖಲಾಗಿತ್ತು. ಬೆಂಗಳೂರಿನಲ್ಲಿ ಮೇ 5 ರಂದು 23,106 ಪ್ರಕರಣಗಳು ದಾಖಲಾಗಿದ್ದವು. ನಿನ್ನೆ ಬೆಂಗಳೂರಿನಲ್ಲಿ 16 ಸಾವಿರ ಪ್ರಕರಣಗಳು ದಾಖಲಾಗಿವೆ. ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳನ್ನ ಹೆಚ್ಚಿಸಲಾಗಿದೆ.

ಅಲ್ಲದೇ ಕೊರೊನಾದ ಮೂರನೇ ಅಲೆ ತಡೆಯಲು ಡಾ. ದೇವಿಶೆಟ್ಟಿ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಿದ್ದೇವೆ ಅಂತಾ ಇದೇ ವೇಳೆ ತಿಳಿಸಿದರು.

The post 3ನೇ ಅಲೆ ತಡೆಗೆ ಡಾ.ದೇವಿಶೆಟ್ಟಿ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಿದ್ದೇವೆ -ಸಿಎಂ ಬಿಎಸ್​ವೈ appeared first on News First Kannada.

Source: newsfirstlive.com

Source link