ಬೆಂಗಳೂರು: ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಅಂತಾ ಡಾ. ದೇವಿ ಶೆಟ್ಟಿ ನೇತೃತ್ವದ ತಂಡ ಇಂದು ಸಿಎಂ ಯಡಿಯೂರಪ್ಪಗೆ ವರದಿ ಸಲ್ಲಿಕೆ ಮಾಡಿದೆ.

ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ತಜ್ಞರ ಸಮಿತಿ, ಸಿಎಂ ಬಿಎಸ್​ ಯಡಿಯೂರಪ್ಪ ಅವರಿಗೆ 92 ಪುಟಗಳ ವರದಿಯನ್ನ ನೀಡಿದೆ. ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಜರಿದ್ದರು.

ಮೂರನೇ ಅಲೆಗೆ ಮಾಡಿಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ವರದಿ ಇದಾಗಿದ್ದು, ಇದರಲ್ಲಿ ಶಾಲೆ ತೆರೆಯುವ ವಿಷಯವನ್ನೂ ತಜ್ಞರು ಉಲ್ಲೇಖ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

The post 3ನೇ ಅಲೆ ತಡೆಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ ಡಾ. ದೇವಿ ಶೆಟ್ಟಿ ತಂಡ appeared first on News First Kannada.

Source: newsfirstlive.com

Source link