ನವದೆಹಲಿ: ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ರೆ ತಜ್ಞರು ಮೂರನೇ ಅಲೆಯ ಬಗ್ಗೆ ಎಚ್ಚರಿಕೆ ನೀಡುತ್ತಲೇ ಬಂದಿದ್ದಾರೆ. ಈ ನಿಟ್ಟಿನಲ್ಲಿ ಕೊರೊನಾ 3ನೇ ಅಲೆ ಎದುರಿಸಲು ಕಾಂಗ್ರೆಸ್‌ ನಾಯಕ ರಾಹುಲ್​ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ.

ಎಲ್ಲಿ ತಪ್ಪಾಗಿದೆಯೆಂಬುದನ್ನು ಅರ್ಥ ಮಾಡಿಕೊಳ್ಳುವುದು. ಇದಕ್ಕಾಗಿ ಒಂದು ಆಯೋಗವನ್ನ ರಚಿಸಿ ಸಮಸ್ಯೆಗಳ ಬಗ್ಗೆ ಅವರಿಂದ ಮಾಹಿತಿ ಪಡೆದು ಸರಿಪಡಿಸಿಕೊಳ್ಳುವುದು. ಆಕ್ಸಿಜನ್‌ನಂಥಹ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವುದು. ಆರ್ಥಿಕ ನೆರವು ಪ್ಯಾಕೇಜ್ ಘೋಷಿಸುವುದು ಮುಂತಾದ ಸಲಹೆಗಳನ್ನು ರಾಹುಲ್ ಗಾಂಧಿ ನೀಡಿದ್ದಾರೆ.

The post 3ನೇ ಕೊರೊನಾ ಅಲೆ ಎದುರಿಸಲು ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ appeared first on News First Kannada.

Source: newsfirstlive.com

Source link