ಬೆಂಗಳೂರು: ಕನ್ನಡ ಸಿನಿಮಾ, ಕಿರುತೆರೆಯ ಹಿರಿಯ ನಟಿ ಬಿ.ಜಯಾ (75 ಇಂದು ವಿಧಿವಶರಾಗಿದ್ದಾರೆ.

ತಿಂಗಳ ಹಿಂದಷ್ಟೇ ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು, ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ  ಬಿ.ಜಯಾ ಇಹಲೋಕ ತ್ಯಜಿಸಿದ್ದಾರೆ.

ಬಿ.ಜಯಾ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಜನಪ್ರಿಯ ಹಾಸ್ಯನಟಿ. ನರಸಿಂಹರಾಜು ಮತ್ತು ದ್ವಾರಕೀಶ್ ಜೋಡಿಯಾಗಿ ಅವರ ಪಾತ್ರಗಳು ಬಹು ಜನಪ್ರಿಯ. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದ್ದಾಗಿದೆ. 350ಕ್ಕೂ ಹೆಚ್ಚು ಸಿನಿಮಾಗಳು, ಹತ್ತಾರು ಧಾರಾವಾಹಿಗಳ ಸಾವಿರಾರು ಸಂಚಿಕೆಗಳಲ್ಲಿ ಅಭಿನಯಿಸಿದ್ದರು.

The post 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಬಿ.ಜಯಾ ಇನ್ನಿಲ್ಲ appeared first on News First Kannada.

Source: newsfirstlive.com

Source link