ಬೆಂಗಳೂರು: ರಾಜ್ಯದ ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಕೊಡಗು, ಮೈಸೂರು, ಬಾಗಲಕೋಟೆ, ಬೀದರ್ ಬೆಳಗಾವಿ, ಧಾರವಾಡ, ​​ಕಲಬುರಗಿಯಲ್ಲಿ ಕೂಡ ಮಳೆಯಾಗುವ ಸಂಭವವಿದ್ದು ಮುಂಜಾಗ್ರತೆಯಿಂದ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: 1000 ವರ್ಷಗಳಲ್ಲೇ ಚೀನಾದಲ್ಲಿ ದೊಡ್ಡ ಮಳೆ; ಭೀಕರ ಪ್ರವಾಹ, 12 ಮಂದಿ ಸಾವು

The post 4 ದಿನ ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? appeared first on News First Kannada.

Source: newsfirstlive.com

Source link