ನಿರ್ವಹಣಾ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಕಿ ಅವಘಡ
Image Credit source: NDTV
ವಿಶಾಖಪಟ್ಟಣಂ: ಆಂಧ್ರಪ್ರದೇಶದ (Andhra Pradesh) ಅನಕಾಪಲ್ಲಿಯಲ್ಲಿರುವ ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ (Farma Labs Limited) ಕಂಪನಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ನಿರ್ವಹಣಾ ಕಾಮಗಾರಿ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ತಿಳಿಸಿದ್ದಾರೆ. ಈ ಘಟನೆಯ ಕುರಿತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಚಿವರು ಮಾಹಿತಿ ನೀಡಿದ್ದಾರೆ.