5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ | BJP Spent Over Rs 340 Crore On Poll Campaign In 5 States Congress shelled out more than Rs 194 crore


ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

5 ರಾಜ್ಯಗಳಲ್ಲಿ ಚುನಾವಣಾ ಪ್ರಚಾರಕ್ಕಾಗಿ ₹340 ಕೋಟಿ ಖರ್ಚು ಮಾಡಿದ ಬಿಜೆಪಿ, ಕಾಂಗ್ರೆಸ್​​ ವ್ಯಯಿಸಿದ್ದು ₹194 ಕೋಟಿ

ಸಂಗ್ರಹ ಚಿತ್ರ

ದೆಹಲಿ: ಈ ವರ್ಷದ ಆರಂಭದಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ₹ 340 ಕೋಟಿ ಖರ್ಚು ಮಾಡಿದ್ದರೆ, ಕಾಂಗ್ರೆಸ್ (Congress) ಈ ರಾಜ್ಯಗಳಲ್ಲಿ ತನ್ನ ಪ್ರಚಾರಕ್ಕಾಗಿ ₹ 194 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿದೆ ಎಂದು ಎರಡೂ ಪಕ್ಷಗಳ ಚುನಾವಣಾ ವೆಚ್ಚದ ವರದಿಗಳು ತಿಳಿಸಿವೆ.ಬಿಜೆಪಿ ಸಲ್ಲಿಸಿದ ವರದಿಯ ಪ್ರಕಾರ ಮತ್ತು ಚುನಾವಣಾ ಆಯೋಗವು ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸಿರುವ ಮಾಹಿತಿ ಪ್ರಕಾರ ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳಿಗಾಗಿ ಪಕ್ಷವು ತನ್ನ ಪ್ರಚಾರಕ್ಕಾಗಿ ₹ 340 ಕೋಟಿಗೂ ಹೆಚ್ಚು ಖರ್ಚು ಮಾಡಿದೆ. ಉತ್ತರ ಪ್ರದೇಶದಲ್ಲಿ ₹ 221 ಕೋಟಿ, ಮಣಿಪುರದಲ್ಲಿ ₹ 23 ಕೋಟಿ, ಉತ್ತರಾಖಂಡದಲ್ಲಿ ₹ 43.67 ಕೋಟಿ, ಪಂಜಾಬ್‌ನಲ್ಲಿ ₹ 36 ಕೋಟಿ ಮತ್ತು ಗೋವಾದಲ್ಲಿ ₹ 19 ಕೋಟಿಗೂ ಹೆಚ್ಚು ಖರ್ಚು ಮಾಡಿದೆ ಎಂದು ಬಿಜೆಪಿಯ ಖರ್ಚುವೆಚ್ಚಗಳ ವರದಿ ತೋರಿಸಿದೆ.ಕಾಂಗ್ರೆಸ್ ಸಲ್ಲಿಸಿದ ವರದಿಯ ಪ್ರಕಾರ, ಐದು ರಾಜ್ಯಗಳಲ್ಲಿ ಪ್ರಚಾರ ಮತ್ತು ಸಂಬಂಧಿತ ವೆಚ್ಚಗಳಿಗಾಗಿ ₹ 194 ಕೋಟಿಗೂ ಹೆಚ್ಚು ಖರ್ಚು ಮಾಡಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳು ಮಾನ್ಯತೆ ಪಡೆದಿವೆ.
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಗಳನ್ನು ಚುನಾವಣಾ ಆಯೋಗದ ಮುಂದೆ ನಿಗದಿತ ಕಾಲಮಿತಿಯಲ್ಲಿ ಸಲ್ಲಿಸುವುದು ಕಡ್ಡಾಯವಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.