ಕೊಡಗು‌: ಜಿಲ್ಲೆಯ ವಿರಾಜಪೇಟೆಯಲ್ಲಿ ಪೊಲೀಸ್ ಹಲ್ಲೆಯಿಂದ ಮಾನಸಿಕ ಅಸ್ವಸ್ಥ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮದುಕರ್ ಪವಾರ್ ಆದೇಶ ಹೊರಡಿಸಿದ್ದಾರೆ.

ಕಳೆದ ಬುಧವಾರ ರಾತ್ರಿ ಮಾನಸಿಕ‌ ಅಸ್ವಸ್ಥ ರಾಯ್ ಡಿಸೋಜ ಎಂಬವರು ಕೈಯಲ್ಲಿ ಕತ್ತಿ ಹಿಡಿದು ರಾತ್ರಿ ವೇಳೆಯಲ್ಲಿ ಸಂಚರಿಸಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯ್ ಅವರನ್ನು ಠಾಣೆಗೆ ಕರೆದೊಯ್ದು ಪೊಲೀಸರು ಹಲ್ಲೆ ಮಾಡಿದ್ದರು. ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ರಾಯ್ ಶನಿವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದರು. ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದಲ್ಲದೆ, ಸೂಕ್ತ ತನಿಖೆಗೆ ಕುಟುಂಬಸ್ತರು ಹಾಗೂ ಕ್ರೈಸ್ತ ಸಂಘಟನೆ ಮತ್ತು ವಿವಿಧ ಪಕ್ಷಗಳ ಮುಖಂಡರು ಆಗ್ರಹಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಶನಿವಾರ ಸಂಜೆ ವಿರಾಜಪೇಟೆ ಠಾಣೆಗೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಕಲೆಹಾಕಿದರು. ಇದಾದ ಬಳಿಕ ಪ್ರಕಾರಕ್ಕೆ ಸಂಬಂಧಿಸಿದಂತೆ ಇಬ್ಬರು ಹೆಡ್ ಕಾನ್ಸ್ಟೇಬಲ್ ಸೇರಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಶೀಘ್ರದಲ್ಲೇ ಅಧಿಕಾರಿಗಳ ತಂಡ ಕೊಡಗಿಗೆ ಆಗಮಿಸಿ ತನಿಖೆ ನಡೆಸಲಿದ್ದಾರೆ ಎಂದು ಮಧುಕರ್ ಪವಾರ್ ಮಾಹಿತಿ ನೀಡಿದ್ದಾರೆ.

The post 8 ಪೊಲೀಸ್ ಸಿಬ್ಬಂದಿಯನ್ನ ಅಮಾನತು ಮಾಡಿದ ದಕ್ಷಿಣ ವಲಯ ಐಜಿಪಿ.. ಕಾರಣ ಏನು..? appeared first on News First Kannada.

Source: newsfirstlive.com

Source link