ಹಾಸನ: ಮದುವೆ ಆಗಿ ಬರೋಬ್ಬರಿ 9 ವರ್ಷದ ಬಳಿಕ ಹೆಂಡತಿಗೆ ಗಂಡ ಕೈಕೊಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗಂಡ ತನ್ನ ಮೊದಲ ಮದುಗೆ ಮುಚ್ಚಿಟ್ಟು ಎರಡನೇ ಮದುವೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಹೀಗಾಗಿ ಹೆಂಡತಿ ಗಂಡ ಮತ್ತು ಆತನ ಕುಟುಂಬದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
9 ವರ್ಷಗಳ ಹಿಂದೆ ಕಾಲೇಜಿನಲ್ಲಿ ಪರಿಚಯವಾಗಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು ಅಕ್ಷತಾ ಹಾಗೂ ಲೋಹಿತ್. ಈಗ ಲೋಹಿತ್ ಅಕ್ಷತಾಗೆ ಮೋಸ ಮಾಡಿ ದಕ್ಷಿಣ ಕನ್ನಡ ಮೂಲದ ಯುವತಿ ಜೊತೆಗೆ ಎಂಗೇಜ್ಮೆಂಟ್ ಆಗಿದ್ದಾರೆ. ಈ ಬಗ್ಗೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನು, ಇವರಿಗೆ 8 ವರ್ಷದ ಮಗ ಇದ್ದಾನೆ. ಹೀಗಿದ್ದರೂ ಬೇರೆ ಮದುವೆ ಮಾಡಿಕೊಳ್ಳಲು ಲೋಹಿತ್ ಮುಂದಾಗಿದ್ದಾರೆ. ಹುಡುಗಿಗೆ ಮದುವೆ ವಿಚಾರ ಮುಚ್ಚಿಟ್ಟು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಸುಳ್ಳು ಹೇಳಿ ಹುಡುಗಿಯನ್ನು ನಂಬಿಸಿರುವ ಬಗ್ಗೆ ಆಡಿಯೋ ಸಾಕ್ಷಿ ಇಟ್ಟುಕೊಂಡು ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ ಹೆಂಡತಿ. ಮಾವ ಮಲ್ಲಿಕಾರ್ಜುನ, ಅತ್ತೆ ಜಯಶೀಲ, ಮೈದುನ ದರ್ಶನ್ ಹಾಗೂ ಪತಿ ವಿರುದ್ದ ಕ್ರಮಕ್ಕೆ ಮಹಿಳೆ ದೂರು ನೀಡಿದ್ದಾರೆ.