94ನೇ ವಸಂತಕ್ಕೆ ಕಾಲಿಟ್ಟ L.K.ಅಡ್ವಾಣಿ.. ಶುಭಾಶಯ ತಿಳಿಸಿದ ಪ್ರಧಾನಿ ಮೋದಿ


ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್​​ಕೆ ಅಡ್ವಾಣಿ ಅವರು ಇಂದು ತಮ್ಮ 94ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಪ್ರಧಾನಿ ಮೋದಿ ಅವರು ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಅಡ್ವಾಣಿ ಮನೆಗೆ ಬಂದಿದ್ದರು. ಈ ವೇಳೆ ಕೇಕ್ ಕತ್ತರಿಸಿ ಹಿರಿಯ ನಾಯಕನಿಗೆ ಶುಭ ಹಾರೈಸಿದರು. ಅಡ್ವಾಣಿ ಭೇಟಿಗೂ ಮುನ್ನ ಟ್ವೀಟ್ ಮಾಡಿದ್ದ ಮೋದಿ.. ಗೌರವಾನ್ವಿತ ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ. ಜನರನ್ನು ಸಬಲೀಕರಣಗೊಳಿಸುವ ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೀವು ಮಾಡಿದ ಸೇವೆಗೆ ರಾಷ್ಟ್ರ ಋಣಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

The post 94ನೇ ವಸಂತಕ್ಕೆ ಕಾಲಿಟ್ಟ L.K.ಅಡ್ವಾಣಿ.. ಶುಭಾಶಯ ತಿಳಿಸಿದ ಪ್ರಧಾನಿ ಮೋದಿ appeared first on News First Kannada.

News First Live Kannada


Leave a Reply

Your email address will not be published.