
ಆಮಿರ್ ಖಾನ್, ಕರೀನಾ ಕಪೂರ್ ಖಾನ್
Boycott Laal Singh Chaddha: ಈ ಹಿಂದೆ ಆಮಿರ್ ಖಾನ್ ಅವರ ಕೆಲವು ಹೇಳಿಕೆಗಳು ವಿವಾದ ಸೃಷ್ಟಿಸಿದ್ದವು. ಈಗ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದ ರಿಲೀಸ್ ಸಂದರ್ಭದಲ್ಲಿ ಆ ಹೇಳಿಕೆಗಳು ಮುಳುವಾಗುತ್ತಿವೆ.
ನಟ ಆಮಿರ್ ಖಾನ್ (Aamir Khan) ಅವರು ಭಾರಿ ಉತ್ಸಾಹದಿಂದ ಹೊಸ ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಅವರು ಮತ್ತು ಕರೀನಾ ಕಪೂರ್ ಜೋಡಿಯಾಗಿ ನಟಿಸಿರುವ ‘ಲಾಲ್ ಸಿಂಗ್ ಚಡ್ಡಾ’ (Laal Singh Chaddha) ಸಿನಿಮಾ ಆಗಸ್ಟ್ 11ರಂದು ವಿಶ್ವಾದ್ಯಂತ ತೆರೆಕಾಣಲಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಆದರೆ ಕೆಲವರು ಈ ಚಿತ್ರವನ್ನು ವಿರೋಧಿಸುತ್ತಿದ್ದಾರೆ. ಆಮಿರ್ ಖಾನ್ ಅವರು ಈ ಹಿಂದೆ ನೀಡಿದ್ದ ಕೆಲವು ಹೇಳಿಕೆಗಳನ್ನು ಇಟ್ಟುಕೊಂಡು ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂದು ನೆಟ್ಟಿಗರು ಅಭಿಯಾನ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ #BoycottLaalSinghChaddha ಹ್ಯಾಟ್ ಟ್ಯಾಗ್ ಟ್ರೆಂಡ್ ಆಗಿದೆ. ಇದರಿಂದ ಚಿತ್ರದ ಬಾಕ್ಸ್ ಆಫೀಸ್ ಮೇಲೆ ನೆಗೆಟಿವ್ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ನಟಿ ಕರೀನಾ ಕಪೂರ್ (Kareena Kapoor Khan) ಅವರು ಈ ಮೊದಲು ನೀಡಿದ್ದ ಕೆಲವು ಹೇಳಿಕೆಗಳು ಕೂಡ ಕಾಂಟ್ರವರ್ಸಿ ಸೃಷ್ಟಿ ಮಾಡಿದ್ದವು. ಅವುಗಳನ್ನು ಜನರು ಈಗ ಮತ್ತೆ ನೆನಪಿಸಿಕೊಂಡಿದ್ದಾರೆ. ಆ ಹೇಳಿಕೆಗಳನ್ನು ಮುಂದಿಟ್ಟುಕೊಂಡು ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾವನ್ನು ವಿರೋಧಿಸಲಾಗುತ್ತಿದೆ. ಅಂತಿಮವಾಗಿ ಈ ವಿವಾದ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬ ಕೌತುಕ ಮೂಡಿದೆ.
ಭಾರತದಲ್ಲಿ ಅಸಹಿಷ್ಣತೆ ಇದೆ ಎಂದು ಈ ಹಿಂದೆ ಆಮಿರ್ ಖಾನ್ ಹೇಳಿದ್ದರು. ಅದೇ ರೀತಿ, ದೇವರಿಗೆ ಹಾಲಿನ ಅಭಿಷೇಕ ಮಾಡುವ ಬದಲು ಅದೇ ಹಾಲನ್ನು ಬಡಮಕ್ಕಳಿಗೆ ನೀಡಿ ಎಂದು ಹೇಳಿಕೆ ನೀಡಿದ್ದರು. ಇಂಥ ಕೆಲವು ಹೇಳಿಕೆಗಳಿಂದ ಅವರು ನೆಟ್ಟಿಗರ ವಿರೋಧ ಕಟ್ಟಿಕೊಂಡಿದ್ದರು. ಈಗ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ಬಿಡುಗಡೆ ಸಂದರ್ಭದಲ್ಲಿ ಆ ಹೇಳಿಕೆಗಳು ಆಮಿರ್ ಖಾನ್ಗೆ ಮುಳುವಾಗುತ್ತಿವೆ.