Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​ | Adipurush teaser released in 5 languages: Prabhas look as Lord Rama goes viral


Adipurush | Prabhas: ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಟೀಸರ್​ ಬಿಡುಗಡೆ ಆಗಿದೆ.

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ನಟಿಸಿರುವ ‘ಆದಿಪುರುಷ್​’ (Adipurush) ಚಿತ್ರ ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ. ಈಗ ಈ ಸಿನಿಮಾದ ಟೀಸರ್​ ರಿಲೀಸ್​ ಆಗಿದೆ. ಆಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮ ಮಾಡಿ ಟೀಸರ್​ (Adipurush Teaser) ಬಿಡುಗಡೆ ಮಾಡಲಾಗಿದೆ. ರಾಮನ ಅವತಾರದಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಸೀತೆಯಾಗಿ ಕೃತಿ ಸನೋನ್​ ಅಭಿನಯಿಸಿದ್ದಾರೆ. ಹತ್ತು ತಲೆಯ ರಾವಣನಾಗಿ ಸೈಫ್​ ಅಲಿ ಖಾನ್​ ಅಬ್ಬರಿಸಿದ್ದಾರೆ. ‘ಆದಿಪುರುಷ್​’ ಟೀಸರ್​​ನಲ್ಲಿನ ಗ್ರಾಫಿಕ್ಸ್​ ಕಂಡು ಫ್ಯಾನ್ಸ್​ ವಾವ್​ ಎನ್ನುತ್ತಿದ್ದಾರೆ. ಹೈಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ. ಚಿತ್ರದ ಪ್ರತಿ ಫ್ರೇಮ್​ ಕೂಡ ಅದ್ದೂರಿಯಾಗಿದೆ ಎಂಬುದಕ್ಕೆ ಈ ಟೀಸರ್​ ಸಾಕ್ಷಿ ಒದಗಿಸುತ್ತಿದೆ.

ಭೂಷಣ್​ ಕುಮಾರ್ ಮತ್ತು ಕ್ರಿಷನ್​ ಕುಮಾರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. 2023ರ ಜನವರಿ 12ರಂದು 3ಡಿ ವರ್ಷನ್​ನಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಅಯೋಧ್ಯೆಯ ಸರಯು ನದಿಯ ದಂಡೆ ಮೇಲೆ ಇಂದು (ಅ.2) ಟೀಸರ್​ ಬಿಡುಗಡೆ ಆಗಿರುವುದು ವಿಶೇಷ. ಬೃಹತ್​ ವೇದಿಕೆಯಲ್ಲಿ, ದೊಡ್ಡ ಎಲ್​ಇಡಿ ಪರದೆ ಮೇಲೆ ಟೀಸರ್​ ಬಿತ್ತರ ಮಾಡಲಾಗಿದೆ. ಇದನ್ನು ಕಂಡು ಫ್ಯಾನ್ಸ್​ ಕಣ್ತುಂಬಿಕೊಂಡಿದ್ದಾರೆ.

ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ‘ಆದಿಪುರುಷ್​’ ಟೀಸರ್​ ರಿಲೀಸ್​ ಆಗಿದೆ. ಎಲ್ಲ ಭಾಷೆಗಳಿಂದಲೂ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ನಿರ್ದೇಶಕ ಓಂ ರಾವುತ್​ ಅವರ ಕಾರ್ಯಕ್ಕೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

TV9 Kannada


Leave a Reply

Your email address will not be published.