Allu Arjun: ಅಲ್ಲು ಅರ್ಜುನ್ ವಿರುದ್ದ ಎಫ್​ಐಆರ್​ ದಾಖಲು..! | FIR registered against Allu Arjun


Allu Arjun: ಅಲ್ಲು ಅರ್ಜುನ್ ಈ ವರ್ಷ ತಮ್ಮ ‘ಪುಷ್ಪ ದಿ ರೂಲ್’ ಚಿತ್ರದ ತಯಾರಿಯಲ್ಲಿದ್ದಾರೆ. ಸುಕುಮಾರ್ ನಿರ್ದೇಶನದ ಪುಷ್ಪ ಚಿತ್ರವು ಸೂಪರ್ ಡೂಪರ್ ಹಿಟ್ ಆಗಿದ್ದು, ಇದೀಗ 2ನೇ ಭಾಗದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದ್ದಾರೆ.

‘ಪುಷ್ಪ’ ಚಿತ್ರದ ಮೂಲಕ ಭಾರತ ಸೇರಿದಂತೆ ವಿಶ್ವದಾದ್ಯಂತ ಬಿರುಗಾಳಿ ಎಬ್ಬಿಸಿದ ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪುಷ್ಪ ಚಿತ್ರವು ಸೂಪರ್ ಡೂಪರ್ ಹಿಟ್ ಆಗುತ್ತಿದ್ದಂತೆ, ಅಲ್ಲು ಅರ್ಜುನ್ ಅನೇಕ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಆದರೀಗ ತಾನು ಅಭಿನಯಿಸಿದ ಜಾಹೀರಾತಿನಲ್ಲಿ ಸುಳ್ಳು ಮಾಹಿತಿ ನೀಡಿದ್ದರ ಬಗ್ಗೆ ನಟನ ವಿರುದ್ದ ದೂರು ದಾಖಲಾಗಿದೆ. ಶಿಕ್ಷಣ ಸಂಸ್ಥೆಯೊಂದರ ವಿಶೇಷ ಜಾಹೀರಾತಿನಲ್ಲಿ ದಾರಿತಪ್ಪಿಸುವ ಮತ್ತು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಕೋತಾ ಉಪೇಂದ್ರ ರೆಡ್ಡಿ ಅಲ್ಲು ಅರ್ಜುನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಅಂಬರ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವ ಕೋತಾ ಉಪೇಂದ್ರ ರೆಡ್ಡಿ, ಇಂತಹ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಜಾಹೀರಾತಿನಲ್ಲಿ ಕಾಣಿಸಿಕೊಂಡ ಅಲ್ಲು ಅರ್ಜುನ್ ವಿರುದ್ಧ ಮತ್ತು ಸುಳ್ಳು ಮಾಹಿತಿ ನೀಡಿದ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ ವಿರುದ್ಧ ದೂರು ದಾಖಲಿಸಲಾಗಿದ್ದು, ಜನರನ್ನು ಸುಳ್ಳು ಮಾಹಿತಿ ಮೂಲಕ ವಂಚಿಸಿರುವ ನಟನ ವಿರುದ್ದ ಮತ್ತು ಶಿಕ್ಷಣ ಸಂಸ್ಥೆಯ ವಿರುದ್ಧ ಶೀಘ್ರವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕೋತ ಉಪೇಂದ್ರ ರೆಡ್ಡಿ ಒತ್ತಾಯಿಸಿದ್ದಾರೆ.

ಅಲ್ಲು ಅರ್ಜುನ್ ಜೂನ್ 6 ರಂದು ಚೈತನ್ಯ ಶಿಕ್ಷಣ ಸಂಸ್ಥೆಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಜಾಹೀರಾತಿನಲ್ಲಿ ನೀಡಿದ ಐಐಟಿ ಮತ್ತು ಎನ್‌ಐಟಿಗಳ ಶ್ರೇಯಾಂಕಗಳ ಬಗ್ಗೆ ಮಾಹಿತಿ ತಪ್ಪಾಗಿತ್ತು. ಇದನ್ನು ಪರಿಶೀಲಿಸದೇ ಅಲ್ಲು ಅರ್ಜುನ್ ತಪ್ಪು ಮಾಹಿತಿ ನೀಡಿದ್ದಾರೆ. ಇಂತಹ ಈ ಜಾಹೀರಾತು ದಾರಿ ತಪ್ಪಿಸುವ ಹಾಗೂ ಸಮಾಜಕ್ಕೆ ತಪ್ಪು ಮಾಹಿತಿ ನೀಡುತ್ತಿದೆ. ಹೀಗಾಗಿ ಶಿಕ್ಷಣ ಸಂಸ್ಥೆ ಮತ್ತು ಅಲ್ಲು ಅರ್ಜುನ್ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಅಂದಹಾಗೆ ಜಾಹೀರಾತಿನ ವಿಚಾರದಲ್ಲಿ ಅಲ್ಲು ಅರ್ಜುನ್ ಟೀಕೆಗೆ ಗುರಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ, ಆಹಾರ ವಿತರಣಾ ಅಪ್ಲಿಕೇಶನ್ ಅನ್ನು ಮಾರ್ಕೆಟಿಂಗ್ ಮಾಡಿದ್ದಕ್ಕಾಗಿ ಅಲ್ಲು ಟ್ರೋಲ್ ಆಗಿದ್ದರು. ಅಷ್ಟೇ ಅಲ್ಲ, ಸರ್ಕಾರಿ ಸಾರಿಗೆ ಸೇವೆಗಳನ್ನು ತಪ್ಪಾಗಿ ಬಿಂಬಿಸಿ ಬೈಕ್ ಆ್ಯಪ್ ಪ್ರಚಾರ ಮಾಡುವ ವಿಚಾರದಲ್ಲಿ ಅಲ್ಲು ಅರ್ಜುನ್ ವಿವಾದಕ್ಕೆ ಸಿಲುಕಿದ್ದರು. ಇದೀಗ ಮತ್ತೊಮ್ಮೆ ಶಿಕ್ಷಣ ಸಂಸ್ಥೆಯ ಜಾಹೀರಾತಿನಲ್ಲಿ ಸುಳ್ಳು ಮಾಹಿತಿ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸದ್ಯ ಅಲ್ಲು ಅರ್ಜುನ್ ಈ ವರ್ಷ ತಮ್ಮ ‘ಪುಷ್ಪ ದಿ ರೂಲ್’ ಚಿತ್ರದ ತಯಾರಿಯಲ್ಲಿದ್ದಾರೆ. ಸುಕುಮಾರ್ ನಿರ್ದೇಶನದ ಪುಷ್ಪ ಚಿತ್ರವು ಸೂಪರ್ ಡೂಪರ್ ಹಿಟ್ ಆಗಿದ್ದು, ಇದೀಗ 2ನೇ ಭಾಗದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದ್ದಾರೆ. ಈ ಚಿತ್ರದ ಬಳಿಕ ಅಲ್ಲು ಅರ್ಜುನ್ ವೇಣು ಶ್ರೀರಾಮ್ ಅವರ ‘ಐಕಾನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ, ಕೊರಟಾಲ ಶಿವ, ಎಆರ್ ಮುರುಗದಾಸ್, ಬೋಯಪತಿ ಶ್ರೀನು ಅವರ ಚಿತ್ರಗಳಲ್ಲೂ ಅಲ್ಲು ಅರ್ಜುನ್ ನಟಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published.