Amazon: ದಿಢೀರ್ ಆಗಿ ಶವೋಮಿ, ರೆಡ್ಮಿ ಸ್ಮಾರ್ಟ್​​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್ ಘೋಷಿಸಿದ ಅಮೆಜಾನ್ | Amazon Sale A Big Discounts on Xiaomi and Redmi Smartphones in Amazon India Check Here


Amazon: ದಿಢೀರ್ ಆಗಿ ಶವೋಮಿ, ರೆಡ್ಮಿ ಸ್ಮಾರ್ಟ್​​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್ ಘೋಷಿಸಿದ ಅಮೆಜಾನ್

Xiaomi and Redmi Smartphones

ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಅಮೆಜಾನ್ (Amazon) ತನ್ನ ಗ್ರಾಹಕರಿಗೆ ಸದಾ ಒಂದಲ್ಲ ಒಂದು ಮೇಳವನ್ನು ಹಮ್ಮಿಕೊಳ್ಳುತ್ತಲೇ ಇರುತ್ತದೆ. ಇದರಲ್ಲಿ ದುಬಾರಿ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತದೆ. ಅನೇಕ ಪ್ರಾಡಕ್ಟ್​​ಗಳ ಮೇಲೆ ರಿಯಾಯಿತಿ ಘೋಷಿಸುತ್ತದೆ. ಆದರೀಗ ಅಮೆಜಾನ್​ನಲ್ಲಿ ಯಾವುದೇ ಸೇಲ್​ ನಡೆಯುತ್ತಿಲ್ಲ. ಆದರೂ ಶವೋಮಿ (Xiaomi) ಕಂಪನಿಯ ರೆಡ್ಮಿ ಫೋನ್​ಗಳನ್ನು ಬಂಪರ್ ಡಿಸ್ಕೌಂಟ್​​ಗೆ ಮಾರಾಟ ಮಾಡುತ್ತಿದೆ. ಕೇವಲ ಸ್ಮಾರ್ಟ್‌ಫೋನ್ ಮಾತ್ರವಲ್ಲದೆ ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಸ್ಮಾರ್ಟ್‌ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಮುಖ್ಯವಾಗಿ ಶವೋಮಿ, ರೆಡ್ಮಿ ಮೊಬೈಲ್‌ (Redmi Phones) ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್‌ ಲಭ್ಯ ಇದೆ. ಹಾಗಾದರೇ ಅಮೆಜಾನ್​ನಲ್ಲಿ ಸದ್ಯ ಆಕರ್ಷಕ ರಿಯಾಯಿತಿ ಪಡೆದುಕೊಂಡಿರುವ ಶವೋಮಿ ಕಂಪನಿಯ ಫೋನ್​ಗಳು ಯಾವುವು ಎಂಬುದನ್ನು ನೋಡೋಣ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್​ನಲ್ಲಿ ಕೇವಲ 16,999 ರೂ. ಗೆ ಮಾರಾಟ ಆಗುತ್ತಿದೆ. ಇದು 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಪವರ್​ಫುಲ್ ಫೋನ್ ಎಂದೇ ಹೇಳಲಾಗುವ ಶವೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ ಈಗ ಕೇವಲ 39,999 ರೂ. ಇದು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB + 128 GB, 8GB + 256 GB ಮತ್ತು 12 GB + 256 GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಇನ್ನು 26,999 ರೂಪಾಯಿಗೆ ಶವೋಮಿ ಎಂಐ 11 ಲೈಟ್ NE 5G ಸ್ಮಾರ್ಟ್‌ಫೋನ್‌ ಮಾರಾಟ ಆಗುತ್ತಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128 GB ಹಾಗೂ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ ಕೂಡ ಆಕರ್ಷಕ ಡಿಸ್ಕೌಂಟ್ ಪಡೆದುಕೊಂಡಿದ್ದು, ಇದರ ಬೆಲೆ 20,499 ರೂ. ಇದು 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಬಜೆಟ್ ಬೆಲೆಗೆ ಲಭ್ಯವಿರುವ ರೆಡ್‌ಮಿ ನೋಟ್ 10s ಈಗ ಮತ್ತಷ್ಟು ಕಡಿಮೆ ದರಕ್ಕೆ ಸಿಗುತ್ತಿದೆ. ಇದರ ಬೆಲೆ ಈಗ 13,999 ರೂ. ಈ ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Smartphones: 10,000 ರೂ. ಗಿಂತ ಕಡಿಮೆ ಬೆಲೆಗೆ ಸಿಗುತ್ತಿರುವ ಬೆಸ್ಟ್ ಸ್ಮಾರ್ಟ್​​ಫೋನ್​ಗಳು ಇಲ್ಲಿದೆ ನೋಡಿ

Redmi 10A: ಬರುತ್ತಿದೆ ಬಂಪರ್ ಫೀಚರ್ಸ್​ನ ರೆಡ್ಮಿ 10A ಸ್ಮಾರ್ಟ್‌ಫೋನ್‌: ಬಜೆಟ್ ಪ್ರಿಯರು ರೆಡಿಯಾಗಿರಿ

TV9 Kannada


Leave a Reply

Your email address will not be published.