ಕೇಂದ್ರ ಗೃಹ ಸಚಿವ ಅಮಿತ್ ಶಾ ರಾತ್ರಿ 10.30ಕ್ಕೆ ದೆಹಲಿಯಿಂದ ಹೊರಟಿದ್ದು, ರಾತ್ರಿ 1 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿಳಿಯಲಿದ್ದಾರೆ.

ಅಮಿತ್ ಶಾ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾತ್ರಿ 10.30ಕ್ಕೆ ದೆಹಲಿಯಿಂದ ಹೊರಟಿದ್ದು, ರಾತ್ರಿ 1 ಗಂಟೆಗೆ ಬೆಂಗಳೂರಿನ (Bengalore) ಹೆಚ್ಎಎಲ್ (HAL) ಏರ್ಪೋರ್ಟ್ಗೆ ಬಂದಿಳಿಯಲಿದ್ದಾರೆ. ಅಮಿತ್ ಶಾ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel)ಬರಲಿದ್ದಾರೆ. ಅಮಿತ್ ಶಾ ಮತ್ತು ನಳಿನ್ ಕುಮಾರ್ ಕಟೀಲ್ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ನಿವಾಸದಲ್ಲಿ ನಡೆದ ಸಭೆ ತಡವಾದ ಹಿನ್ನೆಲೆ ಅಮಿತ್ ಶಾ ದೆಹಲಿಯಿಂದ ತಡವಾಗಿ ಹೊರಟಿದ್ದಾರೆ.
ನಾಳೆ (ಆಗಸ್ಟ 4) ಬೆಳಗ್ಗೆ ಅಮಿತ್ ಶಾ ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ ನಡೆಯುವ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (CII) ಸಂಕಲ್ಪ್ ಸಿದ್ದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 3.15ಕ್ಕೆ ಮದರ್ ಡೈರಿಗೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 3.40ಕ್ಕೆ ಹೆಚ್ಎಎಲ್ ಏರ್ಪೋರ್ಟ್ನಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ವಾಪಸ್ ತೆರಳಲಿದ್ದಾರೆ.