Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು | Assam Flood: Over 47 lakh People affected in 34 districts, death toll mounts to 81 in Assam rain


Assam Flood: ಭೀಕರ ಪ್ರವಾಹದಿಂದ ದ್ವೀಪವಾಗಿದೆ ಅಸ್ಸಾಂ; ಮಳೆಯ ಹೊಡೆತಕ್ಕೆ 81 ಜನ ಸಾವು

ಅಸ್ಸಾಂನಲ್ಲಿ ಭಾರೀ ಪ್ರವಾಹದಿಂದ ಮುಳುಗಡೆಯಾದ ಊರುಗಳು

Image Credit source: Twitter

ಪ್ರವಾಹ ಪೀಡಿತ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 47 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಅಸ್ಸಾಂನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

ಅಸ್ಸಾಂ: ಅಸ್ಸಾಂನಲ್ಲಿ (Assam Rains) ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗೃಹ ಸಚಿವ ಅಮಿತ್ ಶಾ (Amit Shah) ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮ (Himanta Biswa Sarma) ಅವರಿಗೆ ಫೋನ್ ಮಾಡಿ ಪ್ರವಾಹದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ನಿರಂತರ ಮಳೆಯ ನಡುವೆ ಕಳೆದ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಪ್ರವಾಹದಿಂದಾಗಿ ಇಬ್ಬರು ಪೊಲೀಸರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಅಸ್ಸಾಂನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.

ಅಸ್ಸಾಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ರಾಜ್ಯದ ಎಲ್ಲಾ 34 ಜಿಲ್ಲೆಗಳು ಪ್ರವಾಹದ ಬಿಕ್ಕಟ್ಟಿಗೆ ಸಿಲುಕಿವೆ. ಕೊಪಿಲಿ ನದಿಯ ಪ್ರವಾಹದಲ್ಲಿ ಸಿಲುಕಿ ನಲುಗಿದ ಜನರನ್ನು ರಕ್ಷಿಸಲು ಯತ್ನಿಸುತ್ತಿದ್ದಾಗ ಒಬ್ಬ ಪೊಲೀಸ್ ಅಧಿಕಾರಿ ಮತ್ತು ಒಬ್ಬ ಕಾನ್‌ಸ್ಟೆಬಲ್ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರವಾಹ ಮತ್ತು ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 80 ದಾಟಿದೆ.

ಪ್ರವಾಹ ಪೀಡಿತ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 47 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಸೋಮವಾರ ಏಳು ಮಂದಿ ನಾಪತ್ತೆಯಾಗಿದ್ದು, 2.3 ಲಕ್ಷ ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟಾರೆಯಾಗಿ, ಎಲ್ಲಾ ಪೀಡಿತ ಪ್ರದೇಶಗಳಲ್ಲಿ 810 ಪರಿಹಾರ ಶಿಬಿರಗಳು ಮತ್ತು 615 ಪರಿಹಾರ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ.

TV9 Kannada


Leave a Reply

Your email address will not be published.