Ayush Department yoga trainer: ಆಯುಷ್ ಇಲಾಖೆಯಲ್ಲಿ ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ | Ayush Department District Ayush Office applications invited for yoga trainer in tumkur


Ayush Department yoga trainer: ಆಯುಷ್ ಇಲಾಖೆಯಲ್ಲಿ ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ

ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು: ಜಿಲ್ಲೆಯ ಎಲ್ಲಾ ತಾಲೂಕಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಮಂಜೂರಾಗಿರುವ ಯೋಗ ತರಬೇತಿದಾರರ (yoga trainer) ಹುದ್ದೆಗಳನ್ನ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ/ತತ್ಸಮಾನ ವಿದ್ಯಾರ್ಹತೆಯೊಂದಿಗೆ ಯೋಗ ತರಬೇತಿ ಸಂಸ್ಥೆಗಳಿಂದ ಅಧಿಕೃತವಾಗಿ ತರಬೇತಿ ಪಡೆದಿರಬೇಕು. ಭರ್ತಿ ಮಾಡಿದ ಅರ್ಜಿಯನ್ನ ಅಗತ್ಯ ದಾಖಲೆಯೊಂದಿಗೆ ಜಿಲ್ಲಾ ಆಯುಷ್ (Ayush Office) ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾಸ್ಪತ್ರೆ ಆವರಣ, ಬಿಹೆಚ್ ರಸ್ತೆ, ತುಮಕೂರು ಇವರಿಗೆ ಜನವರಿ 21 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯುಷ್ ಇಲಾಖೆ (Ayush Department), ದೂರವಾಣಿ ಸಂಖ್ಯೆ 0816-2252 367 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಜ. 18 ರಂದು ತುಮಕೂರಿನಲ್ಲಿ ಉದ್ಯೋಗ ಮೇಳ
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರವು ಮುಂದಿನ ಮಂಗಳವಾರ ಜನವರಿ 18 ರಂದು ಉದ್ಯೋಗ ಮೇಳ ಆಯೋಜಿಸಿದೆ. ಈ ಮೇಳದಲ್ಲಿ ಬೆಂಗಳೂರು ಮತ್ತು ತುಮಕೂರಿನ ಹೆಸರಾಂತ ಕಂಪನಿಗಳು ಪಾಲ್ಗೊಳ್ಳಲಿವೆ. 18-40 ವರ್ಷದೊಳಗಿನ ಎಸ್ ಎಸ್ ಎಲ್ ಸಿ, ಪಿಯುಸಿ, ಯಾವುದೇ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಪಾಲ್ಗೊಳಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಬಹುದು. ನಗರದ ಚರ್ಚ್ ಸರ್ಕಲ್ ಬಳಿ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 18 ರ ಬೆಳಗ್ಗೆ 10.30 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ವಿದ್ಯಾರ್ಹತೆ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಮುಕುಂದ ಅವರು ಟಿವಿ9 ಗೆ ಮಾಹಿತಿ ನೀಡಿದ್ದಾರೆ.

Congress Padayatre: ಕೆಪಿಸಿಸಿ ಅಧ್ಯಕ್ಷರಿಗೆ ಮಾಜಿ ಸಚಿವ ಸಿಪಿವೈ ಕೇಳಿದ ಆ ಪ್ರಶ್ನೆ ಯಾವುದು? | Tv9kannada

TV9 Kannada


Leave a Reply

Your email address will not be published. Required fields are marked *