BBMP ಯಡವಟ್ಟಿಗೆ 9 ವರ್ಷದ ಬಾಲಕ ಬಲಿ.. ಹೊಂಡದಲ್ಲಿ ಬಿದ್ದು ದುರ್ಮರಣ

ಬೆಂಗಳೂರು: ಬಿಬಿಎಂಪಿ ಯಡವಟ್ಟಿಗೆ 9 ವರ್ಷದ ಬಾಲಕ ಬಲಿಯಾಗಿದ್ದಾನೆ. ನಿರ್ವಹಣೆ ಇಲ್ಲದ ಬಿಬಿಎಂಪಿ ಪಾರ್ಕ್‌ನ ಹೊಂಡದಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ.

ಆಟವಾಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ ದುರಂತ ಘಟನೆ ಬೆಂಗಳೂರು ಟಿ.ದಾಸರಹಳ್ಳಿಯ ಮಲ್ಲಸಂದ್ರದ 13 ನೇ ವಾರ್ಡ್ನ ಕೆಂಪೇಗೌಡ ಪಾರ್ಕ್‌ನಲ್ಲಿ ನಡೆದಿದೆ. 9 ವರ್ಷದ ಪ್ರತಾಪ್ ಮೃತ ಬಾಲಕ. ಈತ ಗಾರ್ಮೆಂಟ್ಸ್ ನೌಕರ ರುದ್ರಮುನಿ ಹಾಗೂ ತಾಯಿ ಕಾಂತಮಣಿ ದಂಪತಿಯ ಪುತ್ರ.

ಮಳೆಯಿಂದಾಗಿ ಪಾರ್ಕ್‌ನ ತಗ್ಗು ಪ್ರದೇಶದಲ್ಲಿ ನಿಂತಿದ್ದ ನೀರಿನಿಂದ ಅವಘಡ ಸಂಭವಿಸಿದೆ.. ಪಾರ್ಕ್ ನಿರ್ವಹಣೆ ಮಾಡಲು ಹಾಗೂ ಭದ್ರತಾ ಸಿಬ್ಬಂದಿ ಇಲ್ಲದಿರುವುದೇ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

News First Live Kannada

Leave a comment

Your email address will not be published. Required fields are marked *