ಒಂದು ವಾರದ ಹಿಂದೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40ಜನ ಅಸ್ವಸ್ಥಗೊಂಡಿದ್ದರು. ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ವೃದ್ದ ಬಸಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ವೃದ್ಧ
ಬೆಳಗಾವಿ: ಕಲುಷಿತ ನೀರು (contaminated water) ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಬೆನ್ನೂರ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಖಾನಾಪುರ(85)ಮೃತಪಟ್ಟ ವೃದ್ದ. ಒಂದು ವಾರದ ಹಿಂದೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40ಜನ ಅಸ್ವಸ್ಥಗೊಂಡಿದ್ದರು. ರಾಮದುರ್ಗ ತಾಲೂಕು ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಿಸದೇ ವೃದ್ದ ಬಸಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಥಳೀಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು, ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದರು.