ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಇಂದು ದಿಢೀರ್ ಭೇಟಿ ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೂರು ಗಂಟೆಗಳ ಕಾಲ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ಸ್ನಾತಕೋತ್ತರ ವಿದ್ಯಾರ್ಥಿನಿಯರ ಹಾಸ್ಟೆಲ್ ಹಾಗೂ ಗೋಶಾಲೆಗೂ ಭೇಟಿ ನೀಡಿ ಪರಿಶೀಲಿಸಿದರು.

ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗೊಳೊಂದಿಗೆ ಪಾಠ ಕೇಳುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (ಎಡ ಚಿತ್ರ) ಮತ್ತು ಗೋಶಾಲೆಯಲ್ಲಿ ಗೋವುಗಳಿಗೆ ಫಲಹಾರ ನೀಡುತ್ತಿರುವ ರಾಜ್ಯಪಾಲರು (ಬಲಚಿತ್ರ)
ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ (Bangalore Agricultural University) ಇಂದು ದಿಢೀರ್ ಭೇಟಿ ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Governor Thawar Chand Gehlot) ಅವರು ಮೂರು ಗಂಟೆಗಳ ಕಾಲ ಕಾರ್ಯವೈಖರಿ ಪರಿಶೀಲನೆ ನಡೆಸಿದರು. ಸ್ನಾತಕೋತ್ತರ ವಿದ್ಯಾರ್ಥಿನಿಯರ ಹಾಸ್ಟೆಲ್ಗೂ ಭೇಟಿ ನೀಡಿ ಪರಿಶೀಲಿಸಿದರು. ಗ್ರಂಥಾಲಯಕ್ಕೆ ತೆರಳಿ ವಿವಿಧ ವಿಭಾಗಗಳಲ್ಲಿ ಲಭ್ಯವಿರುವ ಪುಸ್ತಕಗಳನ್ನು ಪರಿಶೀಲಿಸಿದ ಬಳಿಕ ಸ್ಮಾರ್ಟ್ ಕ್ಲಾಸ್ಗೆ ಭೇಟಿಕೊಟ್ಟು ವಿದ್ಯಾರ್ಥಿಗಳೊಂದಿಗೆ ಕುಳಿತುಕೊಂಡು ಮಾತನಾಡಿದರು. ಅಷ್ಟೇ ಅಲ್ಲದೆ ಗೋ ಶಾಲೆಗೆ ಭೇಟಿ ನೀಡಿ ಗೋವುಗಳ ಸಾಕಾಣಿಕೆಯ ವ್ಯವಸ್ಥೆ ಪರಿಶೀಲಿಸಿ ಗೋವುಗಳಿಗೆ ಫಲಹಾರ ನೀಡಿದರು.
ಕೃಷಿ ವಿಶ್ವವಿದ್ಯಾಲಯದ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಭೇಟಿ ನೀಡಿದರು. ವಿವಿಯ ನಾವೀನ್ಯತೆ ಕೇಂದ್ರ, ಗ್ರಂಥಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ಜೈವಿಕ ಯಂತ್ರ ಗ್ಯಾಲರಿ ಮತ್ತು ಸಂಶೋಧನೆ ಕೇಂದ್ರ, ಮಣ್ಣುರಹಿತ ವಾಣಿಜ್ಯ ಬೀಜೋತ್ಪಾದನಾ ಘಟಕ, ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರ, ಖುಷ್ಕಿ ಬೇಸಾಯ ಸಂಶೋಧನಾ ಪ್ರಾಯೋಜನೆ, ತೋಟಗಾರಿಕೆಯ ಸಸ್ಯ ಅಂಗಾಂಶ ಕೃಷಿ ಪ್ರಯೋಗಾಲಯ ವಿಭಾಗ, ಕೀಟಗಳ ಪ್ರಯೋಗಾಲಯ ಸೇರಿದಂತೆ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ತಾಜಾ ಸುದ್ದಿ