ವಿದ್ಯುತ್ ವ್ಯತ್ಯಯ
ಬೆಂಗಳೂರಿನ ಕೆಲವು ಏರಿಯಾಗಳು ಇಂದು ಶುಕ್ರವಾರ ನವೆಂಬರ್ 19 ರಿಂದ ನವೆಂಬರ್ 21ರವರೆಗೆ ಅಂದರೆ ಭಾನುವಾರದವರೆಗೆ ವಿದ್ಯುತ್ ಕಡಿತವನ್ನು ಎದುರಿಸಲಿದೆ. ಯಾವ ಯಾವ ಏರಿಯಾಗಳಲ್ಲಿ ವಿದ್ಯುತ್ ಕಡಿತ ಎದುರಾಗಲಿದೆ ಎಂಬ ಪಟ್ಟಿಯನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ. ಮೂರು ದಿನಗಳ ಕಾಲ ಯಾವ ಯಾವ ನಗರದಲ್ಲಿ ಪವರ್ ಕಟ್ ಆಗಲಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ.
ದಕ್ಷಿಣ ಬೆಂಗಳೂರಿನ ಜಯನಗರ, ಜೆಪಿ ನಗರ, ಎಚ್ಎಸ್ಆರ್ ಲೇಔಟ್, ಮಾರುತಿ ಲೇಔಟ್, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 5:30ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಅದೇ ರೀತಿ ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30ರವರೆಗೆ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ.