ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಆಗೊಮ್ಮೆ ಈಗೊಮ್ಮೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತಲೇ ಇದ್ದಾರೆ. ಇದೀಗ ಮತ್ತೊಮ್ಮೆ ಬಿಸಿ ಮುಟ್ಟಿಸಲು ನೌಕರರು ಮುಂದಾಗಿದ್ದಾರೆ.

ಕರ್ನಾಟಕ ಸಾರಿಗೆ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಳಂಬ ಧೋರಣೆ ಖಂಡಿಸಿ ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರು ಸಿಡಿದೆದ್ದಿದ್ದು, ನಾಳೆಯಿಂದ (ಜನವರಿ 24) ಧರಣಿ ಸತ್ಯಾಗ್ರಹ (Karnataka KSRTC And BMTC Employess Protest) ನಡೆಸಲು ನಿರ್ಧರಿಸಿದ್ದಾರೆ. ನಗರದಲ್ಲಿರುವ ನಾಲ್ಕೂ ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಯಲಿದ್ದು, ಫ್ರೀಡಂ ಪಾರ್ಕ್ನಲ್ಲಿ ಬಿಎಂಟಿಸಿ ನೌಕರರಿಂದ ಧರಣಿ ಸತ್ಯಾಗ್ರಹ ನಡೆಯಲಿದೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ 2021ರ ಏಪ್ರಿಲ್ ತಿಂಗಳಲ್ಲಿ 15 ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ದರು. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಸಾರಿಕೆ ನೌಕರರು ಹೋರಾಟಕ್ಕೆ ಇಳಿದಿರುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಜನವರಿ 24 ರಂದು ಸಾರಿಗೆ ನೌಕರರಿಂದ ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುತ್ತಿದ್ದು, ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಹೆಚ್ಚಿನ ನೌಕರರು ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಲಿರುವ ಹಿನ್ನಲೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.