Bengaluru Weather Report: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ | A further two days of rain is expected in Bangalore


Bengaluru Weather Report: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ

ಬೆಂಗಳೂರಿನಲ್ಲಿ ಮಳೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ (Bangalore Rains) ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ನ.22) ಬೆಳಗ್ಗೆ 26.5 ರಷ್ಟು ಗರಿಷ್ಟ ಉಷ್ಣಾಂಶವಿದ್ದು. 20.5 ಕನಿಷ್ಠ ಉಷ್ಣಾಂಶ ದಾಖಾಲಾಗಿದೆ. ನಗರದಲ್ಲಿ 5.2 ಮಿಲಿ ಮೀಟರ್ ಮಳೆಯಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.2 ಮಿಮೀ ಮಳೆಯಾಗಿದ್ದು, ಎಚ್ಎಎಲ್ನಲ್ಲಿ 1.4 ಮಿಲಿ ಮೀಟರ್ ಮಳೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 ಮಿಲಿ ಮೀಟರ್ ಮಳೆಯಾಗಿದ್ದರೆ, ಜಿಕೆವಿಕೆಯಲ್ಲಿ 123 ಮಿಲಿ ಮೀಟರ್ ಮಳೆಯಾಗಿದೆ. ರಾಜಧಾನಿಯಲ್ಲಿ (Bangalore Rains) ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವಾರಣ ಇರಲಿದೆ ಅಂತ ಹವಮಾನ ಇಲಾಖೆ ತಜ್ಞ ಸದಾನಂದ ಅಡಿಗರಿಂದ ತಿಳಿಸಿದ್ದಾರೆ.

TV9 Kannada


Leave a Reply

Your email address will not be published. Required fields are marked *