ಮೊಹರಂ (Moharam) ಹಬ್ಬ ಆಚರಣೆ ವೇಳೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಗದಗ (Gadag) ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ.

ಪ್ರಾತಿನಿಧಿಕ ಚಿತ್ರ
ಬೀದರ್: ಪೋಷಕರು ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳು ಆತ್ಮಹತ್ಯೆ (Lovers suicide) ಮಾಡಿಕೊಂಡಿರುವಂತಹ ಘಟನೆ ಬೀದರ್ನ ಲಾಡಗೇರಿ ನಿವಾಸದಲ್ಲಿ ನಡೆದಿದೆ. ಭಾನುವಾರ ಶರತ್(26) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಶರತ್ ಸಾವಿನ ಸುದ್ದಿ ತಿಳಿದು ಸೋಮವಾರ ಬಾವಿಗೆ ಹಾರಿ ಪ್ರಿಯತಮೆ ಸಂಗೀತಾ(22) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೀದರ್ನ ಗಾಂಧಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೊಹರಂ ಹಬ್ಬ ಆಚರಣೆ ವೇಳೆ ಯುವಕರಿಬ್ಬರಿಗೆ ಚಾಕು ಇರಿತ
ಗದಗ: ಮೊಹರಂ (Moharam) ಹಬ್ಬ ಆಚರಣೆ ವೇಳೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಗದಗ (Gadag) ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ. ದಾದಾಪೀರ್ ಹೊಸಮನಿ 23, ಮುಸ್ತಾಕ್ ಹೊಸಮನಿ 24 ಎಂಬುವರಿಗೆ ಚಾಕೂ ಇರಿಯಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಇನ್ನೊಬ್ಬರಿಗೆ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೋಹರಂ ಹಬ್ಬ ಆಚರಣೆ ವೇಳೆ ಕಾಲು ತುಳಿದಿದ್ದಕ್ಕೆ ಗುಂಪಿನಿಂದ ಚಾಕೂ ಇರಿಯಲಾಗಿದೆ ಎಂದು ಆರೋಪಿಸಲಾಗಿದೆ. RSS ಕಾರ್ಯಕರ್ತ ಸೋಮು ಗುಡಿ ಎಂಬಾತ ಸೇರಿ ಹಲವರಿಂದ ಚಾಕೂ ಇರಿಯಲಾಗಿದೆ ಎಂದು ಆರೋಪಿಸಲಾಗಿದೆ.