ರಾಜ್ಯದಲ್ಲಿ ಈಗಾಗಲೇ ಎರಡು ಒಮಿಕ್ರಾನ್ ತಳಿಯ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಮಹತ್ವವಾದ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅದ್ರಲ್ಲಿ ಪ್ರಮುಖವಾಗಿ ಶಾಲೆಗೆ ಮಕ್ಕಳನ್ನು ಸೇರಿಸಬೇಕಿದ್ದು, ಪೋಷಕರು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದಿರಬೇಕು ಎಂದು ತಿಳಿಸಿದ್ದಾರೆ.
ಇನ್ನೊಂದು ಮಹತ್ವದ ಸಂಗತಿ ಎಂದ್ರೆ, ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್ ರೂಮ್ಗಳು ಮತ್ತೆ ಪುನಾರಂಭಗೊಳ್ಳುತ್ತಿವೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕಂದಾಯ ಸಚಿವ ಇಡೀ ರಾಜ್ಯದಲ್ಲಿ ಕಂಟ್ರೋಲ್ ರೂಮ್ಗಳು ಪುನಾರಂಭ ಆಗುತ್ತವೆ ಎಂದು ತಿಳಿಸಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಬಿಬಿಎಂಪಿ ಕಂಟ್ರೋಲ್ ರೂಂ ಕೂಡ ಮತ್ತೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. . ಇಂದು ಸಿಎಂ ಬೊಮ್ಮಾಯಿ ಜೊತೆ ಸಭೆ ನಡೆದ ಬಳಿಕ ಅವರು ಈ ತೀರ್ಮಾನಗಳನ್ನು ಘೋಷಿಸಿದರು
The post Big Breaking: ಇಡೀ ರಾಜ್ಯದಲ್ಲಿ ಕಂಟ್ರೋಲ್ ರೂಮ್ಗಳು ಪುನಾರಂಭ-R ಅಶೋಕ್ appeared first on News First Kannada.