Big Breaking: ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯುಯು ಲಲಿತ್ ನೇಮಕ | Big Breaking: Justice Uday Lalit appointed as the 49th CJI of the country


ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ
ಹೊರಡಿಸಿದೆ. ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.

ದೇಶದ‌ 49ನೇ ಸಿಜೆಐಯಾಗಿ (Chief Justice of India) ನ್ಯಾಯಮೂರ್ತಿ  ಉದಯ್ ಉಮೇಶ್ ಲಲಿತ್ (Justice Uday Umesh Lalit)  ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.  ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ  ಹೊರಡಿಸಿದೆ.   ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ಎನ್.ವಿ.ರಮಣ ಸೇವಾವಧಿ ಅಂತ್ಯ ಬಳಿಕ ಸಿಜೆಐ ಆಗಿ ಪದಗ್ರಹಣ ಮಾಡಲಿದ್ದಾರೆ. ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿಗಳು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾದ ಶ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು 27 ಆಗಸ್ಟ್ 2022 ರಂದು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನ್ಯಾಯಮೂರ್ತಿ ಯುಯು ಲಲಿತ್ ಅವರನ್ನು ಆಗಸ್ಟ್ 2014 ರಂದು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕ ಮಾಡಲಾಯಿತು. ನ್ಯಾಯಮೂರ್ತಿ ಎಸ್‌ಎಂ ಸಿಕ್ರಿ ನಂತರ ನ್ಯಾಯಮೂರ್ತಿ ಲಲಿತ್ ಅವರು ಬಾರ್‌ನಿಂದ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಏರಿದ ಭಾರತದ ಎರಡನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಸಿಕ್ರಿ ಅವರು 1971 ರಲ್ಲಿ 13 ನೇ ಸಿಜೆಐ ಆಗಿ ಸೇವೆ ಸಲ್ಲಿಸಿದ್ದರು. ನ್ಯಾಯಮೂರ್ತಿ ಲಲಿತ್ ಅವರು ಎರಡು ಅವಧಿಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಹಲವಾರು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.

ನವೆಂಬರ್ 9, 1957 ರಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜನಿಸಿದ ನ್ಯಾಯಮೂರ್ತಿ ಲಲಿತ್ ಅವರು ಜೂನ್, 1983 ರಲ್ಲಿ ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್‌ನಿಂದ ವಕೀಲರಾಗಿ ನೋಂದಾಯಿಸಿಕೊಂಡರು. ಅವರು ಡಿಸೆಂಬರ್ 1985 ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಕೆಲಸ ಮಾಡಿದ್ದು ನಂತರ 1986, ಜನವರಿಯಲ್ಲಿ ದೆಹಲಿಯಲ್ಲಿ ಕಾರ್ಯ ಮುಂದುವರಿಸಿದರು.

TV9 Kannada


Leave a Reply

Your email address will not be published. Required fields are marked *