Nupur Sharma ನೂಪುರ್ ಶರ್ಮಾ ಅವರು ಬೇರೆ ಬೇರೆ ರಾಜ್ಯಗಳಲ್ಲಿ ತನ್ನನ್ನು ತಾನು ಸಮರ್ಥಿಸಿಕೊಳ್ಳಬೇಕಾಗಿಲ್ಲ ಎಂಬ ಕಾರಣಕ್ಕೆ ತನ್ನ ವಿರುದ್ಧದ ಎಲ್ಲಾ ಎಫ್ಐಆರ್ಗಳನ್ನು ಒಟ್ಟುಗೂಡಿಸುವಂತೆ ಸುಪ್ರೀಂಗೆ ಮನವಿ ಮಾಡಿದ್ದರು

ನೂಪುರ್ ಶರ್ಮಾ
ಪ್ರವಾದಿ ಮೊಹಮ್ಮದ್ ಬಗ್ಗೆಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲ ಎಫ್ಐಆರ್ ಗಳನ್ನು ಸುಪ್ರೀಂಕೋರ್ಟ್ ಒಟ್ಟುಗೂಡಿಸಿ ಅವುಗಳನ್ನು ದೆಹಲಿಗೆ ವರ್ಗಾಯಿಸಲು ಆದೇಶಿಸಿದೆ . ನೂಪುರ್ ಶರ್ಮಾ ಅವರು ಬೇರೆ ಬೇರೆ ರಾಜ್ಯಗಳಲ್ಲಿ ತನ್ನನ್ನು ತಾನು ಸಮರ್ಥಿಸಿಕೊಳ್ಳಬೇಕಾಗಿಲ್ಲ ಎಂಬ ಕಾರಣಕ್ಕೆ ತನ್ನ ವಿರುದ್ಧದ ಎಲ್ಲಾ ಎಫ್ಐಆರ್ಗಳನ್ನು ಒಟ್ಟುಗೂಡಿಸುವಂತೆ ಸುಪ್ರೀಂಗೆ ಮನವಿ ಮಾಡಿದ್ದರು. ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಅವರ ಹೇಳಿಕೆ ಖಂಡಿಸಿ ಭಾರತದಲ್ಲಿ ಭಾರಿ ಪ್ರತಿಭಟನೆಗಳು ಮಾತ್ರವಲ್ಲದೆ ಗಲ್ಫ್ ರಾಷ್ಟ್ರಗಳಿಂದ ಅಧಿಕೃತ ದೂರುಗಳು ಬಂದ ನಂತರ ಬಿಜೆಪಿ ಅವರನ್ನು ವಕ್ತಾರ ಸ್ಥಾನದಿಂದ ವಜಾಗೊಳಿಸಿತ್ತು