Big News: ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಣೆ; ತೇಜ್ ಪ್ರತಾಪ್ ಸೇರಿ 31 ನೂತನ ಸಚಿವರ ಪ್ರಮಾಣವಚನ ಸ್ವೀಕಾರ | Bihar Cabinet Expansion 31 Bihar MLAs, including Tej Pratap sworn in RJD gets lion’s share of portfolios


ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದ ಹೊಸ ಸಂಪುಟದ ಭಾಗವಾಗಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಸೇರಿದಂತೆ 31 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

Big News: ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಣೆ; ತೇಜ್ ಪ್ರತಾಪ್ ಸೇರಿ 31 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

ತೇಜ್ ಪ್ರತಾಪ್ ಸೇರಿ 31 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ ಆರ್​ಜೆಡಿಯ ತೇಜಸ್ವಿ ಯಾದವ್ ಅವರೊಂದಿಗೆ ಮತ್ತೆ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ್ದಾರೆ. ಇಂದು ನಿತೀಶ್ ಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರಲ್ಲಿ ಜೆಡಿಯುಗಿಂತ ಆರ್‌ಜೆಡಿಗೆ ಹೆಚ್ಚು ಸಚಿವ ಸ್ಥಾನ ಸಿಕ್ಕಿದೆ. ಹಿಂದಿನ ಮಹಾಮೈತ್ರಿಕೂಟ ಸರ್ಕಾರಕ್ಕಿಂತ ಕಾಂಗ್ರೆಸ್‌ನ ಸ್ಥಾನಮಾನ ಕಡಿಮೆಯಾಗಿದೆ. ಜೆಡಿಯು ಸಂಸದೀಯ ಪಕ್ಷದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರಿಗೆ ಭಾರೀ ಹಿನ್ನಡೆಯಾಗಿದೆ. ಉಪಮುಖ್ಯಮಂತ್ರಿಯಾಗಿರುವ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಸೇರಿದಂತೆ 31 ಶಾಸಕರು ಇಂದು ಬಿಹಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದ ಹೊಸ ಸಂಪುಟದ ಭಾಗವಾಗಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಸೇರಿದಂತೆ 31 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ನಿರೀಕ್ಷೆಯಂತೆ ರಾಜ್ಯದಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಆರ್‌ಜೆಡಿಗೆ ಸಚಿವ ಸ್ಥಾನದ ಸಿಂಹಪಾಲು ಸಿಕ್ಕಿದೆ. ಸಂಪುಟ ವಿಸ್ತರಣೆಗೂ ಮುನ್ನ ಜೆಡಿಯು ಶಾಸಕ ಲೇಶಿ ಸಿಂಗ್ ಅವರು ಹೊಸ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಮಂಗಳವಾರ ಖಚಿತಪಡಿಸಿದ್ದರು.

TV9 Kannada


Leave a Reply

Your email address will not be published.