Big News: 2016ರ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು ಶಿಕ್ಷೆ | Gujarat Congress MLA Jignesh Mevani Jailed For 6 Months In 2016 Case Kannada News


ಅಂದಹಾಗೆ, ಜಿಗ್ನೇಶ್ ಮೇವಾನಿ ಪ್ರಸ್ತುತ ಅಸ್ಸಾಂ ನ್ಯಾಯಾಲಯದಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

Big News: 2016ರ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು ಶಿಕ್ಷೆ

ಜಿಗ್ನೇಶ್ ಮೇವಾನಿ

Image Credit source: NDTV

ಅಹಮದಾಬಾದ್: 2016ರ ಪ್ರಕರಣವೊಂದರಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮತ್ತು ಶಾಸಕ ಜಿಗ್ನೇಶ್ ಮೇವಾನಿ (Jignesh Mevani) ಮತ್ತು ಇತರ 18 ಮಂದಿಗೆ ಅಹಮದಾಬಾದ್ ಮೆಟ್ರೋ ಪೊಲೀಸ್ ಕೋರ್ಟ್ ಶುಕ್ರವಾರ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಗುಜರಾತ್ ವಿಶ್ವವಿದ್ಯಾನಿಲಯದ ಕಾನೂನು ಕಟ್ಟಡದ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಇತರ ದಲಿತ ಹಕ್ಕುಗಳ ಗುಂಪುಗಳೊಂದಿಗೆ ಸೇರಿ 2016ರಲ್ಲಿ ಪ್ರತಿಭಟನೆ ನಡೆಸಿದ್ದರು. ಆ ಕಟ್ಟಡಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಹೆಸರಿಡಬೇಕು ಎಂದು ಒತ್ತಾಯಿಸಿದ್ದರು.

ಆದರೆ, ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಮೇಲ್ಮನವಿ ಸೆಷನ್ಸ್ ನ್ಯಾಯಾಲಯವು ಅಕ್ಟೋಬರ್ 17ರವರೆಗೆ ಶಿಕ್ಷೆಯನ್ನು ತಡೆಹಿಡಿದಿದೆ. ಹಾಗೇ, 18 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

TV9 Kannada


Leave a Reply

Your email address will not be published.