
ಬಿಹಾರದಲ್ಲಿ ಮಳೆ
Assam Flood: ಬಿಹಾರದ 16 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಗೆ 33 ಮಂದಿ ಸಾವನ್ನಪ್ಪಿದ್ದಾರೆ. ಅಸ್ಸಾಂ ರಾಜ್ಯದ 29 ಜಿಲ್ಲೆಗಳಲ್ಲಿ ಸುಮಾರು 7.12 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ.
ಬಿಹಾರ: ನಿರಂತರ ಮಳೆ ಮತ್ತು ಪ್ರವಾಹದ ಪರಿಣಾಮವಾಗಿ ಭಾರತದ ಮೂರು ರಾಜ್ಯಗಳಲ್ಲಿ ಭಾರೀ ಹಾನಿಯಾಗಿದೆ. ಬಿಹಾರ, ಅಸ್ಸಾಂ ಮತ್ತು ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಬಿಹಾರದಲ್ಲಿ (Bihar Rains) ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದಾಗಿ 33 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪರಿಹಾರ ಘೋಷಿಸಿದ್ದಾರೆ. ಪ್ರವಾಹದಿಂದ ಅಸ್ಸಾಂ ಹೆಚ್ಚು ಹಾನಿಗೊಳಗಾಗಿದೆ. ಅಸ್ಸಾಂ (Assam Rain) ರಾಜ್ಯ ವಿಪತ್ತು ನಿರ್ವಹಣೆಯ ಪ್ರಕಾರ, ಪ್ರವಾಹ ಮತ್ತು ಭೂಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿದೆ. ಅಸ್ಸಾಂ ರಾಜ್ಯದ 29 ಜಿಲ್ಲೆಗಳಲ್ಲಿ ಸುಮಾರು 7.12 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ.
ಬಿಹಾರ:
ಬಿಹಾರದ 16 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಗೆ 33 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ನೀಡಲು ಸೂಚನೆಗಳನ್ನು ನೀಡಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. ಮನೆಯಲ್ಲಿಯೇ ಇರಿ ಮತ್ತು ಸುರಕ್ಷಿತವಾಗಿರಿ ಎಂದು ಅವರು ಸೂಚಿಸಿದ್ದಾರೆ. ಸಾವನ್ನಪ್ಪಿದ 33 ಜನರ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.