ಹುಬ್ಬಳ್ಳಿ: ಬಿಟ್ ಕಾಯಿನ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ರು. ಈ ಪ್ರಕರಣದಲ್ಲಿ ಪ್ರಭಾವಿ ನಾಯಕರು ಇದ್ದಾರೆ ಅನ್ನೋದು ನನಗೆ ಗೊತ್ತು. ಅದನ್ನ ಅವರು ಬಾಯಿ ಬಿಟ್ಟು ಹೇಳಲಿ. ಸತ್ಯ ಹೊರ ಬಿದ್ದರೆ ಸರ್ಕಾರ ಉಳಿಯುತ್ತಾ ಅಂತ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಂದುವರೆದು ಮಾತನಾಡಿದ ಸಿದ್ದರಾಮಯ್ಯ, ಬಿಟ್ ಕಾಯಿನ್ ಬಗ್ಗೆ ಬೊಮ್ಮಾಯಿ ಹೇಳೋದು ನನಗೇನು ಗೊತ್ತು. ತನಿಖೆಗೆ ಕೊಟ್ಟಿದ್ದೀವಿ ಅಂತಾರೆ, ಸೆಂಟ್ರಲ್ ಏಜೆನ್ಸಿಗೆ ಕೊಟ್ಟಿದ್ದೀವಿ ಅಂತ ಹೇಳ್ತಾರೆ. ಪ್ರಕರಣದ ತನಿಖೆ ಆಗಲಿ, ಸತ್ಯ ಹೊರಗೆ ಬರಲಿ ಅಂತ ವಿಪಕ್ಷ ನಾಯಕ ಆಗ್ರಹಿಸಿದರು.
ಇನ್ನು ಈ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ.. ಬಿಟ್ ಕಾಯಿನ್ ವಿಚಾರವಾಗಿ ಪ್ರತಿಪಕ್ಷಗಳು ಮಾಡುತ್ತಿರುವುದು ಆಧಾರ ರಹಿತ ಆರೋಪಗಳು. ಈಗಾಗಲೇ ರಾಜ್ಯ ಸರ್ಕಾರ ಇ.ಡಿ ತನಿಖೆಗೆ ವಹಿಸಿದೆ. ಪ್ರತಿದಿನ ಈ ಬೇಸ್ ಲೆಸ್ ಆರೋಪಗಳಿಗೆ ಉತ್ತರಿಸೋಕ್ಕೆ ಆಗಲ್ಲ. ಪ್ರತಿಪಕ್ಷಗಳು ರಾಜಕೀಯ ಪ್ರೇರಿತವಾಗಿ ಆರೋಪಗಳು ಮಾಡುತ್ತಿವೆ ಎಂದು ತಿರುಗೇಟು ನೀಡಿದ್ದಾರೆ.
ಮತ್ತೊಂದು ಕಡೆ ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಲಾಗುವುದು ಅಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನಲ್ಲಿ ಈ ವಿಷಯವಾಗಿ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಪ್ರಕರಣದ ವಿಚಾರವಾಗಿ ಮುಖ್ಯಮಂತ್ರಿಗಳು ಆದೇಶ ಕೊಟ್ಟಿದ್ದಾರೆ ಅಂತ ತಿಳಿಸಿದ್ರು. ಇನ್ನು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಎಂದು ನಾನು ಹೇಳಲ್ಲ. ಈ ವಿಚಾರ ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ ಅಂತ ಮಾಜಿ ಸಿಎಂ ಹೇಳಿದ್ರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಯಾವುದೇ ಸುದ್ದಿಗಳು ಇಲ್ಲ ಅಂತ ತಿಳಿಸಿದ್ರು.
ಕಾಂಗ್ರೆಸ್ ನಾಯಕರ ಹೆಸರು ಇದೆ ಎಂದು ಹೇಳಿ
ನಮ್ಮ ಬಾಯಿಮುಚ್ಚಿಸಲು ಪ್ರಯತ್ನ ಮಾಡಬೇಡಿ.ಕೇಂದ್ರ ಮತ್ತು ರಾಜ್ಯಗಳಲ್ಲಿ ನಿಮ್ಮದೇ ಸರ್ಕಾರ ಇದೆ.
ತನಿಖೆ ನಡೆಸಿ ಅಪರಾಧಿಗಳನ್ನು ಬಯಲಿಗೆಳೆಯಿರಿ,ಅವರೆಲ್ಲ ಯಾವ ಪಕ್ಷದವರು ಎನ್ನುವುದನ್ನು ಆ ಮೇಲೆ ನೋಡಿಕೊಳ್ಳೋಣ.@BSBommai @narendramodi #Bitcoin
4/4— Siddaramaiah (@siddaramaiah) November 12, 2021