BJP Janaspandana Program Live: ಇಂದು ಬಿಜೆಪಿ ಜನಸ್ಪಂದನ ಸಮಾವೇಶ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಭಾಗಿ ಸಾಧ್ಯತೆ | BJP Karnataka Janaspandana Program Live Updates Karnataka Govt Sadhana Samavesha today in Doddaballapur Ahead of Election Latest News


Karnataka Government Janaspandana Program Live Updates: ಉದ್ಘಾಟನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಬೇಕಿತ್ತು. ಅವರ ಬದಲಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಭಾಗವಹಿಸಲಿದ್ದಾರೆ.

BJP Janaspandana Program Live: ಇಂದು ಬಿಜೆಪಿ ಜನಸ್ಪಂದನ ಸಮಾವೇಶ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಭಾಗಿ ಸಾಧ್ಯತೆ

ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಶಕ್ತಿ ಪ್ರದಶರ್ನಕ್ಕೆ ಆಡಳಿತ ಪಕ್ಷ ಬಿಜೆಪಿ ಮುಂದಾಗಿದ್ದು, ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಆ ಮೂಲಕ ಮುಂಬರುವ ವಿಧಾನಸಭಾ ಚುಣಾವಣೆ ಗೆಲುವಿಗೆ ಸಜ್ಜಾಗಿದೆ. ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 5 ಸಾವಿರ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಭಾಗಿ ಸಾಧ್ಯತೆ ಇದೆ.

ಈ ಹಿಂದೆ ಅನಿವಾರ್ಯ ಕಾರಣಗಳಿಂದಾಗಿ ಜನಸ್ಪಂದನ ಸಮಾವೇಶ ಮೂಂದುಡಲಾಗಿತ್ತು. ಆದರೆ ಈ ಭಾರಿ ನಿಗದಿಯಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇನ್ನೂ ಉದ್ಘಾಟನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸಬೇಕಿತ್ತು. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಗಳಿರುವುದರಿಂದ ಆಗಮಿಸುತ್ತಿಲ್ಲ ಎನ್ನಲಾಗುತ್ತಿದೆ. ಅವರ ಬದಲಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಭಾಗವಹಿಸಲಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಸಚಿವರು, ಶಾಸಕರು ಹಾಗೂ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಸಮಾವೇಶಕ್ಕೆ ಬರುವವರಿಗೆ ಬೆಳಗ್ಗೆಯಿಂದಲೇ ತಿಂಡಿ ವ್ಯವಸ್ಥೆ ಮಾಡಿದ್ದು. ತಿಂಡಿಗೆ ರೈಸ್​ಬಾತ್​, ಮೊಸರನ್ನ ಹಾಗೂ ಬಾದುಷಾ ತಯಾರಿಸಲಾಗಿದೆ. 900 ಬಾಣಸಿಗರು ಹಾಗೂ ಭಟ್ಟರಿಂದ ಅಡುಗೆ ತಯಾರಿ ಮಾಡಲಾಗುತ್ತಿದ್ದು, ಜನಸ್ಪಂದನ ಸಮಾವೇಶದಲ್ಲಿ 200 ಊಟದ ಕೌಂಟರ್​​ಗಳು, 20 ಕೌಂಟರ್ ವಿಶೇಷ ಚೇತನರಿಗೆ, 40 ಮಹಿಳೆಯರಿಗೆ, ಪುರುಷರಿಗೆ 140 ಊಟದ ಕೌಂಟರ್​ಗಳನ್ನ ತೆರೆಯಲಾಗಿದೆ. ನೀರಿನ ಬಳಕೆಗೆ 200 ತಾತ್ಕಾಲಿಕ ಕೊಳಾಯಿಗಳ ಸ್ಥಾಪನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

TV9 Kannada


Leave a Reply

Your email address will not be published.