BMTC and KSRTC: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ಹಿನ್ನೆಲೆ 2 ಗಂಟೆಗಳ ಕಾಲ ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ ಸಂಚಾರ ಸ್ಥಗಿತ – Narendra Modi Bengaluru Visit: BMTC And KSRTC buses to be cancelled for 2 hours on Friday


ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು(ಶುಕ್ರವಾರ) 2 ಗಂಟೆಗಳ ಕಾಲ ಬಿಎಂಟಿಸಿ(BMTC), ಕೆಎಸ್​ಆರ್​ಟಿಸಿ(KSRTC) ಬಸ್​ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು(ಶುಕ್ರವಾರ) 2 ಗಂಟೆಗಳ ಕಾಲ ಬಿಎಂಟಿಸಿ(BMTC), ಕೆಎಸ್​ಆರ್​ಟಿಸಿ(KSRTC) ಬಸ್​ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ. ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಹಿನ್ನಲೆ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ಬಸ್ ಸಂಚಾರ ಸ್ಥಗಿತ ಸ್ಥಗಿತಗೊಳಿಸಲಾಗುತ್ತಿದೆ.

ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವ ವಾಹನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತಿದ್ದು, ಮೆಜೆಸ್ಟಿಕ್​ಗೆ ಬರುವ ಬರುವ ಪ್ರಯಾಣಿಕರನ್ನು ಹತ್ತಿರದ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನಲೆ 2 ಗಂಟೆಗಳ ಕಾಲ ಮೆಜೆಸ್ಟಿಕ್​ಗೆ ಬರುವ ಬಸ್ ಸಂಚಾರ ಸ್ಥಗಿತ ಮಾಡುವಂತೆ ಪೊಲೀಸರಿಂದ ಮನವಿ ಮಾಡಲಾಗಿದೆ.

ಉಪ್ಪಾರಪೇಟೆ ಪೊಲೀಸ್ ಠಾಣೆಯಿಂದ ಸಾರಿಗೆ ನಿಗಮಕ್ಕೆ ಮನವಿ ಮಾಡಲಾಗಿದೆ. ಹೀಗಾಗಿ ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಟ್ರಾಫಿಕ್ ಸಮಸ್ಯೆ (Traffic Problem) ಎದುರಾಗಬಹುದು.

ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಬದಲಿ ಮಾರ್ಗದ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಮೈಸೂರು ಬ್ಯಾಂಕ್​ ವೃತ್ತ-ಅರಮನೆ ರಸ್ತೆಯಲ್ಲಿ ಸಂಚಾರ ನಿಷೇಧ ಹಿನ್ನೆಲೆ ಕೆಂಪೇಗೌಡ ರಸ್ತೆಯ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಸಂಚಾರ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು 11 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಯಾವೆಲ್ಲಾ ರೈಲುಗಳ ಸಂಚಾರದಲ್ಲಿ ವ್ಯತ್ಯಯ:

ಕಣ್ಣೂರು-ಕೆಎಸ್​ಆರ್​ ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಅರಸೀಕೆರೆ-ಕೆಎಸ್​ಆರ್​ ಸ್ಪೆಷಲ್ ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕೋಲಾರ-ಯಶವಂತಪುರ​​ ಡೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಮೈಸೂರು-ನಾಯಂಡಹಳ್ಳಿ​​ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಹಿಂದೂಪುರ-ಯಶವಂತಪುರ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಮಾರಿಕುಪ್ಪಂ-ಕಂಟೋನ್ಮೆಂಟ್​ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕೆಎಸ್​ಆರ್-ತುಮಕೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಹಾಸನ-ಕೆಎಸ್​ಆರ್​ ಡೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕೆಎಸ್​ಆರ್​-ವೈಟ್​ಫೀಲ್ಡ್​ ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಮೈಸೂರು-ಕೆಎಸ್​ಆರ್​ ಮೈಸೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ಕುಪ್ಪಂ-ಬೆಂಗಳೂರು ಮೆಮು ಎಕ್ಸ್​ಪ್ರೆಸ್​ ರೈಲು ಸಂಚಾರ ರದ್ದು

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.