BREAKING ಇನ್ಮುಂದೆ ಜನವರಿ 23ರಿಂದ ಗಣರಾಜ್ಯೋತ್ಸವ ಆಚರಣೆ


ನವದೆಹಲಿ: ಗಣರಾಜ್ಯೋತ್ಸವದ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನ ಕೈಗೊಂಡಿದೆ. ದೇಶದಲ್ಲಿ ಗಣರಾಜ್ಯೋತ್ಸವ ಆಚರಣೆಗಳು ಜನವರಿ 24 ರ ಬದಲಿಗೆ ಜನವರಿ 23 ರಿಂದ ಪ್ರಾರಂಭವಾಗಲಿವೆ ಎಂದು ಕೇಂದ್ರ ಸರ್ಕಾರ ಮೂಲಗಳು ತಿಳಿಸಿವೆ.

ಈ ಹಿಂದೆ ಇದು ಜನವರಿ 24 ರಿಂದ ಪ್ರಾರಂಭವಾಗುತ್ತಿತ್ತು. ಗಣರಾಜ್ಯೋತ್ಸವದ ಆಚರಣೆಯಲ್ಲಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನೂ ಸೇರಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಸುಭಾಷ್ ಚಂದ್ರ ಬೋಸ್ 23 ಜನವರಿ, 1897 ರಂದು ಜನಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇದುವರೆಗಿನ ತನ್ನ ಅಧಿಕಾರಾವಧಿಯಲ್ಲಿ ಹಲವು ಮಹತ್ವದ ದಿನಗಳನ್ನು ಪ್ರಕಟಿಸಿದೆ.

 

News First Live Kannada


Leave a Reply

Your email address will not be published. Required fields are marked *