ಯಾದಗಿರಿ: ಹಾಸ್ಟೆಲ್ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅಬ್ಬೆತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.
ಉಪಹಾರದಲ್ಲಿ ಹಾವಿನ ಕಳೆಬರಹ ಪತ್ತೆ ಆಗಿರೋದು ಕಂಡು ಬಂದಿದೆ. ಬೆಳಗಿನ ಉಪಹಾರಕ್ಕೆ ಉಪ್ಪಿಟ್ಟು ಮಾಡಲಾಗಿತ್ತು. ಉಪಹಾರ ಸೇವಿಸಿದ 56 ವಿದ್ಯಾರ್ಥಿಗಳೂ ಕೂಡ ಅಸ್ವಸ್ಥಗೊಂಡಿದ್ದಾರೆ. ಹಾವಿನ ಮರಿ ಸತ್ತಿರೋದು ಪತ್ತೆಯಾದ ಬಳಿಕ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.
ಅಸ್ವಸ್ಥಗೊಂಡ 56 ವಿದ್ಯಾರ್ಥಿಗಳಿಗೆ ಬೆಳಗ್ಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲವು ವಿದ್ಯಾರ್ಥಿಗಳನ್ನ ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿ ನೀಡಿದ್ದಾರೆ.