BREAKING ಜರ್ಮನ್​​ನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರಿಗೆ ಕೊರೊನಾ; ಓರ್ವ ಎಸ್ಕೇಪ್


ಬೆಂಗಳೂರು: ಒಮಿಕ್ರಾನ್ ಆತಂಕದ ನಡುವೆಯೇ ಜರ್ಮನಿಯಿಂದ ಇಂದು ಬೆಳಗ್ಗೆ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜರ್ಮನಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ತಪಾಸಣೆಗೆ ಒಳಪಡಿಸಿದಾಗ ಪಾಸಿಟಿವ್ ಇರೋದು ದೃಢಪಟ್ಟಿದೆ.

ಇಂದು ಬೆಳಗ್ಗಿನ ಜಾವ 3 ಗಂಟೆಗೆ ಜರ್ಮನಿಯಿಂದ ಬಂದ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಯಿತು. ಈ ವೇಳೆ ಇಬ್ಬರಿಗೆ ಸೊಂಕು ಇರೋದು ದೃಢವಾಗಿದೆ. ಓರ್ವ ಸೋ‌ಂಕಿತನನ್ನ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್​ಗೆ ಕಳುಹಿಸಲಾಗಿದೆ. ಇನ್ನು ಮತ್ತೊಬ್ಬ ಸೊಂಕಿತ ಏರ್​ಪೋರ್ಟ್​ನಿಂದ ಅಧಿಕಾರಿಗಳ ಕಣ್ಣು ತಪ್ಪಿಸಿಕೊಂಡು ನಾಪತ್ತೆ ಆಗಿದ್ದಾನೆ ಅನ್ನೋ ಮಾಹಿತಿ ತಿಳಿದುಬಂದಿದೆ.

ಸೊಂಕೀತನ ನಾಪತ್ತೆಯಿಂದ ಏರ್​​ಪೋರ್ಟ್​ನಲ್ಲಿ ಆತಂಕ ಹೆಚ್ಚಾಗಿದೆ. ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿಗಳ‌ ನಿರ್ಲಕ್​ಷ್ಯದಿಂದಾಗಿ ಈ ಅಚಾತುರ್ಯ ನಡೆದಿದೆ ಎನ್ನಲಾಗಿದೆ. ಸದ್ಯ ಸೋಂಕಿತನ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

News First Live Kannada


Leave a Reply

Your email address will not be published. Required fields are marked *