ದಾವಣಗೆರೆ: ಭೀಕರ ರಸ್ತೆ ಅಪಘಾತದಲ್ಲಿ ಎಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಇಂಡಿಕಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆ ಪರಿಣಾಮ 7 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.