BREAKING ದೇವನಹಳ್ಳಿ ಢಾಬಾದಲ್ಲಿ ಭಾರೀ ಬೆಂಕಿ, ಅಗ್ನಿಶಾಮಕ ಸಿಬ್ಬಂದಿ ದೌಡು


ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದ್ದು, ದೇವನಹಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಿದ್ದ ಢಾಬಾ​ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 7 ರ ಗಗನ್ ಢಾಬಾ ಹೆಸರಿನ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಒಳಗಿದ್ದ ಪಿಠೋಪಕರಣಗಳು ಸುಟ್ಟು ಭಸ್ಮವಾಗಿವೆ. ನೋಡ, ನೋಡುತ್ತಿದ್ದಂತೆಯೇ ಬೆಂಕಿಯ ರೌದ್ರನರ್ತನ ಜೋರಾಗಿದೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅದೃಷ್ಟವಶಾತ್ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಹಕರಿಲ್ಲದ ಕಾರಣ ಭಾರೀ ಅನಾಹುತ ಒಂದು ತಪ್ಪಿದೆ ಎಂದು ಹೇಳಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

The post BREAKING ದೇವನಹಳ್ಳಿ ಢಾಬಾದಲ್ಲಿ ಭಾರೀ ಬೆಂಕಿ, ಅಗ್ನಿಶಾಮಕ ಸಿಬ್ಬಂದಿ ದೌಡು appeared first on News First Kannada.

News First Live Kannada


Leave a Reply

Your email address will not be published. Required fields are marked *