ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆಯನ್ನ ಈ ಕೂಡಲೇ ಮೊಟಕುಗೊಳಿಸಿ ಎಂದು ಕಾಂಗ್ರೆಸ್ ಹೈಕಮಾಂಡ್, ರಾಜ್ಯ ಕೈನಾಯಕರಿಗೆ ತಿಳಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಕರೆ ಮಾಡಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನೀವು ಈ ಕೂಡಲೇ ಪಾದಯಾತ್ರೆಯನ್ನ ಮೊಟಕುಗೊಳಿಸಿ. ಕೊರೊನಾ ಕಡಿಮೆ ಆದಮೇಲೆ ನಾವು ಮತ್ತೊಮ್ಮೆ ಹೋರಾಟ ನಡೆಸೋಣ ಎಂದು ಡಿಕೆಎಸ್ಗೆ ಸುರ್ಜೇವಾಲ ತಿಳಿಸಿದ್ದಾರೆ ಅಂತಾ ಹೇಳಲಾಗಿದೆ.