BREAKING ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ; ಸಿಲಿಂಡರ್ ಸ್ಫೋಟಗೊಂಡು ಭಾರೀ ಅನಾಹುತ


ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದ್ದು, ಶಾರ್ಟ್ ಸರ್ಕ್ಯೂಟ್​​ನಿಂದ ಸಂಭವಿಸಿದ ಬೆಂಕಿಯಿಂದಾಗಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಗಳೂರಿನ ವಿವೇಕನಗರದ ಹೊನ್ನಾರ್ ಪೇಟ್​ನಲ್ಲಿರುವ ಗ್ಯಾರೇಜ್​ನಲ್ಲಿ ಈ ಅವಘಡ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಕಾರು ಗ್ಯಾರೇಜ್ ಸಂಪೂರ್ಣ ಭಸ್ಮವಾಗಿದೆ. ಗ್ಯಾರೇಜ್​ನಲ್ಲಿರುವ 3 ಬೈಕ್, 4 ಕಾರು ಬೆಂಕಿಗಾಹುತಿಯಾಗಿದೆ. ನಾಸೀರ್ ಎಂಬುವವರ ಮಾಲೀಕತ್ವದ ಗ್ಯಾರೇಜ್ ಇದಾಗಿತ್ತು. ಬೆಂಕಿ ಹೊತ್ತಿಕೊಂಡ ಪರಿಣಾಮ ಗ್ಯಾರೇಜ್​​ನಲ್ಲಿದ್ದ 2 ಸಿಲಿಂಡರ್ ಕೂಡ ಸ್ಫೋಟಗೊಂಡಿದೆ.

ಸ್ಫೋಟದ ಭೀಕರತೆಗೆ ನಗರದ ಜನ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿದ್ದು, ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

News First Live Kannada


Leave a Reply

Your email address will not be published.