ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲೆ ಎರಡು ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಯಲಹಂಕ ಮಾರ್ಗವಾಗಿ ಏರ್ಪೋರ್ಟ್ ಕಡೆ ತೆರಳ್ತಿದ್ದ ಬಿಳಿ ಬಣ್ಣದ ಲ್ಯಾನ್ಸರ್ ಕಾರು, ಏರ್ಪೋರ್ಟ್ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಮತ್ತೊಂದು ವೋಕ್ಸ್ ವ್ಯಾಗನ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.