BREAKING ಮೈಸೂರಿನ ಪುರಾತನ ಪ್ರಸಿದ್ಧ ಪಂಚಗವಿಮಠದ ಗೋಡೆ ಕುಸಿತ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರುಣನ ಆರ್ಭಟಕ್ಕೆ ಪುರಾತನ ಪ್ರಸಿದ್ಧ ಪಂಚಗವಿಮಠದ ಕಟ್ಟಡ ಕುಸಿತಗೊಂಡಿದೆ. 200 ವರ್ಷಗಳ ಇತಿಹಾಸ ಈ ಪಂಚಗವಿಮಠಕ್ಕೆ ಇದೆ.

ಪಂಚಗವಿಮಠದ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಗೋಡೆ ಕುಸಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಸುಮಾರು 20 ವಿದ್ಯಾರ್ಥಿಗಳು ಈ ಮಠದಲ್ಲಿ ವಾಸವಿದ್ದಾರೆ.

ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಸರಿಯಾದ ನಿರ್ವಹಣೆ ಇಲ್ಲದೇ ಶಿಥಿಲಾವಸ್ಥೆ ತಲುಪಿದೆ ಅನ್ನೋ ಆರೋಪ ಕೇಳಿಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

News First Live Kannada

Leave a comment

Your email address will not be published. Required fields are marked *