ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು ನಿಜ, ಆದರೆ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಅಂತಾ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುತ್ತೂರು ಶ್ರೀಗಳ ಭೇಟಿ ಬಳಿಕ ರಮೇಶ್ ಜಾರಕಿಹೊಳಿ ಈ ಹೇಳಿಕೆಯನ್ನ ನೀಡಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗೂ ಏನು ಮಾತಾಡಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ. ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದರು.

ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ನನಗೆ ಇನ್ನು ಆ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನ ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು. ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು ಎಂದರು.

The post BREAKING ಯೂ-ಟರ್ನ್ ಹೊಡೆದ ಮಾಜಿ ಸಚಿವ ರಮೇಶ್ ಜಾರಕಿಹೊಳಿ appeared first on News First Kannada.

Source: newsfirstlive.com

Source link