ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಲು ಪ್ರಯತ್ನಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ ಅಂತಾ ವರದಿಯಾಗಿದೆ.
ಮನೆಗೆ ನುಗ್ಗಲು ಯತ್ನಿಸುತ್ತಿರುವಾಗ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿ ಆತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.