Breaking News: ಖ್ಯಾತ ನಟ ಅರುಣ್​ ಬಾಲಿ ನಿಧನ; ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ | Arun Bali Death: Veteran actor passed away at 79 in Mumbai


Arun Bali No More: ಚಿತ್ರರಂಗದಲ್ಲಿ ಅರುಣ್​ ಬಾಲಿ ಅವರಿಗೆ ಹಲವು ವರ್ಷಗಳ ಅನುಭವ ಇತ್ತು. ಅನೇಕ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದರು.

Breaking News: ಖ್ಯಾತ ನಟ ಅರುಣ್​ ಬಾಲಿ ನಿಧನ; ಹಿರಿಯ ಕಲಾವಿದನ ಅಗಲಿಕೆಗೆ ಕಂಬನಿ ಮಿಡಿದ ಚಿತ್ರರಂಗ

ಅರುಣ್ ಬಾಲಿ

ಹಿಂದಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ನಟ ಅರುಣ್​ ಬಾಲಿ (Arun Bali) ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ (Arun Bali Death) ಸುದ್ದಿ ತಿಳಿದು ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಅರುಣ್​ ಬಾಲಿ ಅವರಿಗೆ ಹಲವು ವರ್ಷಗಳ ಅನುಭವ ಇತ್ತು. ಅನೇಕ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದರು. 79ನೇ ವಯಸ್ಸಿಗೆ ಅರುಣ್​ ಬಾಲಿ ಇಹಲೋಕ ತ್ಯಜಿಸಿದ್ದಾರೆ. ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ಆಮಿರ್​ ಖಾನ್​ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ (Laal Singh Chaddha) ಸಿನಿಮಾದಲ್ಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕ ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಸಂತಾಪದ ನಡಿಗಳನ್ನು ತಿಳಿಸಲಾಗುತ್ತಿದೆ.

TV9 Kannada


Leave a Reply

Your email address will not be published.