ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ಚುನಾವಣೆಗೆ ಹೋಗಲು ಬಿಎಸ್ವೈ ಬೆಂಬಗಲಿಗ ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ ಎಂದು ರಮೇಶ್ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜ್ಯಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕೆಪಿಸಿಸಿ ವಕ್ತಾರ ರಮೇಶ್ ಬಾಬು
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಕರ್ನಾಟಕಕ್ಕೆ ಭೇಟಿ ನೀಡಿ ಅಲೆ ಎಬ್ಬಿಸಲು ಶುರು ಮಾಡಿದ್ದಾರೆ. ಇದರ ಮಧ್ಯೆ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗಲು ಬಿಜೆಪಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಎಸ್ ಯಡಿಯೂರಪ್ಪ ಬೆಂಬಲಿಗ ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಹೊಸ ಬಾಂಬ್ ಸಿಡಿಸಿದ್ದಾರೆ.