Budget Smartphone: ಅತಿ ಕಡಿಮೆ ಬೆಲೆಗೆ ಸಿಗುತ್ತಿರುವ ಅತ್ಯುತ್ತಮ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ | Best phones to consider under Rs 10000 Oppo Redmi Realme Samsung


Budget Smartphone: ಅತಿ ಕಡಿಮೆ ಬೆಲೆಗೆ ಸಿಗುತ್ತಿರುವ ಅತ್ಯುತ್ತಮ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ

Best phones under Rs 10K

ಈಗ ನಾವೆಲ್ಲರೂ ಸ್ಮಾರ್ಟ್ ಪ್ರಪಂಚದಲ್ಲಿ ಬದುಕುತ್ತಿದ್ದೇವೆ. ಸ್ಮಾರ್ಟ್‌ಫೋನ್‌ಗಳು (Smartphone) ಇಲ್ಲದ ನಮ್ಮ ಜೀವನವನ್ನು ಊಹಿಸಿಕೊಳ್ಳುವುದು ಕೂಡ ಬಹಳ ಕಷ್ಟ. ಹೀಗಾಗಿ ಎಲ್ಲರೂ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಆದರೆ ನಾವು ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಮುಂದಾಗುವ ಸಂದರ್ಭದಲ್ಲಿ ನಾವು ಗಮನಿಸಬೇಕಾದ ಮುಖ್ಯವಾದ ವಿಚಾರ ಎಂದರೆ ಆ ಫೋನಿನ ಬೆಲೆ. ಅದರಲ್ಲೂ ಮಾರುಕಟ್ಟೆಯು ಅತ್ಯಂತ ಸೂಕ್ಷ್ಮವಾಗಿರುವಂತಹ ಭಾರತದಂತಹ ದೇಶಗಳಲ್ಲಿ ಬೆಲೆಯ ವಿಚಾರವು ಬಹಳಷ್ಟು ಮುಖ್ಯ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಇದರ ಜೊತೆಗೆ ಗ್ರಾಹಕರು ಕ್ಯಾಮೆರಾ (Camera), RAM​, ಬ್ಯಾಟರಿ ಆಧರಿಸಿ ಸ್ಮಾರ್ಟ್​ಫೋನ್​ ಖರೀದಿಸುತ್ತಾರೆ. ಅದರಂತೆ ಸದ್ಯ 10 ಸಾವಿರಕ್ಕಿಂತ (Under 10,000 Smartphone) ಕಡಿಮೆ ಬೆಲೆಗೆ ದೊರಕುವ ಮತ್ತು ಆಕರ್ಷಕ ಫೀಚರ್​​ವುಳ್ಳ ಸ್ಮಾರ್ಟ್​ಫೋನ್​ಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

Realme Narzo 30A: ಈ ಸ್ಮಾರ್ಟ್​ಫೋನ್​ 6.5-ಇಂಚಿನ HD+ ಡಿಸ್​ಪ್ಲೇ ಹೊಂದಿದ್ದು, ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G85 ಚಿಪ್‌ಸೆಟ್ ಒಳಗೊಂಡಿದೆ. 4GB RAM ಮತ್ತು 64GB ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆಯಲ್ಲಿ ಸಿಗಲಿದೆ. ಡ್ಯುಯಲ್-ಸಿಮ್ ಕಾರ್ಡ್‌ ಬೆಂಬಲಿಸುವ ಈ ಸ್ಮಾರ್ಟ್​ಫೋನ್​ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. 13 ಮೆಗಾಪಿಕ್ಸೆಲ್  ಪ್ರೈಮರಿ  ಕ್ಯಾಮೆರಾವನ್ನು ಇದರಲ್ಲಿದೆ. ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 6,000mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 8,999 ರೂ ಆಗಿದೆ.

Micromax IN 2b: ಭಾರತೀಯ ಮೂಲದ ಮೈಕ್ರೋಮ್ಯಾಕ್ಸ್ IN 2b  ಸ್ಮಾರ್ಟ್​ಫೋನ್​ 10 ಸಾವಿರ ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಫೋನ್ ಆಗಿದೆ. ಇದು 6.25 ಇಂಚಿನ ಡಿಸ್​ಪ್ಲೇ ಹೊಂದಿದ್ದು, 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕರ್ ಪಡೆದುಕೊಂಡಿದೆ. ಈ ಸ್ಮಾರ್ಟ್​ಫೋನ್​ ಹಿಂಭಾಗದಲ್ಲಿ 13 ಮೆಗಾಪಿಕ್ಸೆಲ್ ಮತ್ತು 2 ಮೆಗಾಪಿಕ್ಸೆಲ್ ಸೆನ್ಸಾರ್​ನ ಕ್ಯಾಮೆರಾ ಹೊಂದಿದ್ದು, 5 ಮೆಗಾಪಿಕ್ಸೆಲ್ ಸೆಲ್ಫೀ ಕ್ಯಾಮೆರಾ ನೀಡಲಾಗುದೆ. ಇದರ ಬೆಲೆ ರೂ. 8,499 ರೂ. ಆಗಿದೆ.

ಮೋಟೋರೊಲಾ Moto E7 Plus: ಮೋಟೋರೊಲಾ ಕಂಪನಿಯ ಮೋಟೋ E7 ಪ್ಲಸ್ ಫೋನ್ ಬೆಲೆ ಕೇವಲ 8,999 ರೂ. ಆಗಿದೆ. ಇದು 6.5 ಇಂಚಿನ ಡಿಸ್​ಪ್ಲೇ ಹೊಂದಿದ್ದು, ಕ್ವಾಲ್ಕಂ ಸ್ನಾಪ್ಡ್ರಾಗನ್ 460 SoC ಪ್ರೊಸೆಸರ್​ನಿಂದ ಕೂಡಿದೆ. 8 ಮೆಗಾಫಿಕ್ಸೆಲ್​ ಸೆಲ್ಫೀ ಕ್ಯಾಮೆರಾ, 48 ಮೆಗಾಫಿಕ್ಸೆಲ್​ ಬ್ಯಾಕ್ ಕ್ಯಾಮೆರಾ ನೀಡಲಾಗಿದೆ. 5000mAh ಸಾಮರ್ಥ್ಯದ ಬ್ಯಾಟರಿ ಪವರ್ ಕೂಡ ಇದೆ.

Samsung Galaxy F02s: ಸ್ಯಾಮ್‌ಸಂಗ್‌ನ ಈ ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ 6.5 ಇಂಚಿನ HD+ Infinity-V ಡಿಸ್​​ಪ್ಲೇ ಹೊಂದಿದೆ, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 450 SoC ಜೊತೆಗೆ 4GB RAM ಒಳಗೊಂಡಿದೆ, ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್​ಫೋನ್​ ಹಿಂಭಾಗದಲ್ಲಿ 13 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ಹೊಂದಿದೆ. ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್ ಕ್ಯಾಮೆರಾ  ನೀಡಲಾಗಿದೆ. ಧೀರ್ಘ ಕಾಲ ಬ್ಯಾಟರಿಯಾಗಿ 6,000mAh ಬ್ಯಾಟರಿಯನ್ನು ನೀಡಲಾಗಿದೆ. ಇದರ ಬೆಲೆ 9,499 ರೂ ಆಗಿದೆ.

Nokia C20 Plus: ನೋಕಿಯಾ ಸಿ 20 ಪ್ಲಸ್ 4,950mAh ಬ್ಯಾಟರಿಯೊಂದಿಗೆ 6.5-ಇಂಚಿನ HD+ ಸ್ಕ್ರೀನ್ ಮತ್ತು ಆಕ್ಟಾ-ಕೋರ್ ಯುನಿಸೋಕ್ SC9863a SoC ಯನ್ನು ಹೊಂದಿದೆ. ಜೊತೆಗೆ 3GB RAM ಆಯ್ಕೆಯಲ್ಲಿ ಸಿಗುತ್ತಿದೆ. 8 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್ ಹೊಂದಿರುವ ಈ ಸ್ಮಾರ್ಟ್​ಫೋನ್​ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರ ಬೆಲೆ 9,999 ರೂ.

Redmi Note 11T: ಶವೋಮಿಯಿಂದ ಬಂಪರ್ ಆಫರ್: ರೆಡ್ಮಿ ನೋಟ್ 11T ಉಚಿತವಾಗಿ ಪಡೆಯಿರಿ: ಹೀಗೆ ಮಾಡಿದ್ರೆ ಸಾಕು

Lava Agni 5G: ವಿದೇಶಿ ಕಂಪನಿಗಳ ಹುಟ್ಟಡಗಿಸಿದ ಲಾವಾ ಅಗ್ನಿ 5G ಫೋನ್ ಖರೀದಿಗೆ ಲಭ್ಯ: ಮೊದಲ ದಿನವೇ ಭರ್ಜರಿ ಸೇಲ್

(Best phones to consider under Rs 10000 Oppo Redmi Realme Samsung )

TV9 Kannada


Leave a Reply

Your email address will not be published. Required fields are marked *