ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಶುರುವಾಗಿದೆ. ಕಮಿಷನರ್ ಕಮಲ್ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ಪಾರ್ಕ್ ಇನ್ಸ್ಪೆಕ್ಟರ್ ಮಾರುತಿ ವಿರುದ್ಧ ತನಿಖೆ ನಡೆಸುವಂತೆ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ರಮೇಶ್ ಜಾರಕಿಹೊಳಿ ಅತ್ಯಾಚಾರ ನಡೆಸಿದ್ದಾರೆ ಅಂತಾ ಸಂತ್ರಸ್ಥ ಯುವತಿ ದೂರು ನೀಡಿದ್ರು. ಆದ್ರೆ ಕಬ್ಬನ್ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸದೇ ನಿರ್ಭಯ ಗೈಡ್ಲೈನ್ ಉಲ್ಲಂಘಿಸಿದ್ದಾರೆ ಅಂತಾ ಜನಾಧಿಕಾರ ಸಂಘರ್ಷ ಪರಿಷತ್ನ ಅಧ್ಯಕ್ಷ ಆದರ್ಶ ಅಯ್ಯರ್ ಪಿಸಿಆರ್ ದಾಖಲಿಸಿದ್ರು. ಈ ದೂರಿನ ಆಧಾರದ ಮೇಲೆ ಮೂವರು ಅಧಿಕಾರಿಗಳ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ.
The post ‘CB’ ಕೇಸ್ನಲ್ಲಿ ಮೂವರು ಅಧಿಕಾರಿಗಳಿಗೆ ಸಂಕಷ್ಟ! appeared first on News First Kannada.