ನವದೆಹಲಿ: CBSE 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರ ನಡೆಯಲಿದೆ.

ದೇಶದಲ್ಲಿ ಕೊರೊನಾ ಇನ್ನು ಕಡಿಮೆಯಾಗಿಲ್ಲ. ಈ ಸಂದರ್ಭದಲ್ಲಿ ಪರೀಕ್ಷೆ ನಡೆದರೆ ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ಬರಬಹುದಾಗಿದೆ ಎಂದು​ ಅಡ್ವಿಕೇಟ್​ ಮಮತಾ ಶರ್ಮಾ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಸಿಬಿಎಸ್​​ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಮತ್ತು ಪರ್ಯಾಯ ಮೌಲ್ಯಮಾಪನ ಮಾನದಂಡದ ಆಧಾರದ ಮೇಲೆ ಫಲಿತಾಂಶಗಳನ್ನು ರೂಪಿಸಲು ಕೋರಲಾಗಿದೆ.

ನ್ಯಾಯಮೂರ್ತಿ ಖಾನ್ವಿಲ್ಕರ್ ಮತ್ತು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು ಇಂದು ಅರ್ಜಿಯನ್ನು ಆಲಿಸಲಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರವು ನಾಳೆ ಮಹತ್ತರವಾದ ನಿರ್ಧಾರ ಪ್ರಕಟಿಸೋ ಸಾಧ್ಯತೆ ಇದೆ

The post CBSE 12ನೇ ಕ್ಲಾಸ್ ಪರೀಕ್ಷೆ ರದ್ದು ಕೋರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿಂದು ವಿಚಾರಣೆ appeared first on News First Kannada.

Source: newsfirstlive.com

Source link